ಜೆಡಿಎಸ್ ಅಸ್ತಿತ್ವವನ್ನು ಬಿಜೆಪಿ ಕಿತ್ತುಕೊಳ್ಳಲು ಹೇಗೆ ಸಾಧ್ಯ? ; ಡಿಸಿಎಂ ಡಿಕೆ ಶಿವಕುಮಾರ್
ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಅವರ ಅಸ್ತಿತ್ವವನ್ನು ಕಿತ್ತುಕೊಳ್ಳಲು ಬಿಜೆಪಿಗೆ ಹೇಗೆ ಸಾಧ್ಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬಿಜೆಪಿ ಪಾದಯಾತ್ರೆ ಸಂಬಂಧ ಮೈತ್ರಿಯಲ್ಲಿ ಅಪಸ್ವರ ಮೂಡಿರುವ ಬಗ್ಗೆ ವಿಧಾನಸೌಧದ ಅವರಣದಲ್ಲಿ ಮಾಧ್ಯಮಗಳು ಗುರುವಾರ ಗಮನ ಸೆಳೆದಾಗ ಶಿವಕುಮಾರ್ ಈಗೆ ಪ್ರತಿಕ್ರಯಿಸಿದರು.
ಕುಮಾರಸ್ವಾಮಿ ಆಗಲಿ, ನಾನಾಗಲಿ, ಬಿಜೆಪಿಯವರಾಗಲಿ ಎಲ್ಲರೂ ಅವರವರ ಪಕ್ಷದ ರಾಜಕಾರಣ ಮಾಡುತ್ತಾರೆ.ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಹಾಗೂ ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸಿದ್ದೇನೆ. ಈ ವಿಚಾರಕ್ಕೆ ಮೈತ್ರಿಯಲ್ಲಿ ತಿಕ್ಕಾಟ ನೆಡೆಯುತ್ತಿರಬಹುದು ಎಂದು ತಿಳಿಸಿದರು.
ಬಿಜೆಪಿಯವರು ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲದೊಂದಿಗೆ ಸುಮಾರು 10 ಕ್ಷೇತ್ರಗಳನ್ನು ಗೆದ್ದಿದ್ದಾರೆ. ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಜೆಡಿಎಸ್ ನೆಲೆ ಇರುವ ಪ್ರದೇಶ. ಇಲ್ಲಿ ಬಿಜೆಪಿಯವರು ಜೆಡಿಎಸ್ನವರನ್ನು ಪರಿಗಣಿಸದೇ ತಮಟೆ ಬಾರಿಸಿಕೊಂಡು ನಾಯಕತ್ವ ಅಪಹರಿಸಲು ಹೋದರೆ ಅದನ್ನು ಸಹಿಸಿಕೊಳ್ಳಲು ಜೆಡಿಎಸ್ಗೆ ಸಾಧ್ಯವೇ? ಜೆಡಿಎಸ್ ಹಾಗೂ ಬಿಜೆಪಿ ವಿಲೀನವಾಗುವುದಾದರೆ ಈ ರೀತಿ ಮಾಡಬಹುದು ಎಂದರು.


