ಬಿಬಿಎಂಪಿ ವ್ಯಾಪ್ತಿಯ ರಸ್ತೆ ಗುಂಡಿ ಮುಚ್ಚಲು ವಲಯ ಮಟ್ಟದಲ್ಲಿ ‘ಟಾಸ್ಕ್ ಫೋರ್ಸ್” ರಚನೆ

Share It

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಸಮಗ್ರ ಕಾರ್ಯಾಚರಣೆ, ಮೇಲ್ವಿಚಾರಣೆ ಮತ್ತು ಅನುಷ್ಠಾನಕ್ಕಾಗಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ವಲಯ ಮಟ್ಟದಲ್ಲಿ ‘ಟಾಸ್ಕ್ ಫೋರ್ಸ್” ಸಮಿತಿ ರಚಿಸಿ ಆದೇಶಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 12,878 ಕಿ.ಮೀ ರಸ್ತೆ ಜಾಲವಿದ್ದು, ಈ ರಸ್ತೆಗಳ ಪೈಕಿ 1344.84 ಕಿ.ಮೀ ಉದ್ದದ ರಸ್ತೆಗಳನ್ನು ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳೆಂದು ಪರಿಗಣಿಸಲಾಗಿದ್ದು, ರಸ್ತೆಗಳನ್ನು ರಸ್ತೆ ಮೂಲಸೌಕರ್ಯ ಶಾಖೆಯಿಂದ ನಿರ್ವಹಣೆ ಮಾಡಲಾಗುತ್ತಿದೆ. ಉಳಿಕೆ 11533.16 ಕಿ.ಮೀ ರಸ್ತೆಗಳನ್ನು ವಲಯ ಮಟ್ಟದಲ್ಲಿ ನಿರ್ವಹಣೆ ಮಾಡಲಾಗುತ್ತಿರುತ್ತದೆ.

ರಸ್ತೆಗಳಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ಮತ್ತು ನಿಗಧಿತ ಅವಧಿಯಲ್ಲಿ ನಿರ್ವಹಣೆ ಮಾಡಲು ವಲಯ ಮಟ್ಟದಲ್ಲಿ “ವಲಯವಾರು ಟಾಸ್ಕ್ ಫೋರ್ಸ್” ರಚನೆ ಮಾಡುವುದು ಸೂಕ್ತವೆಂದು ತೀರ್ಮಾನಿಸಿ, ಸದರಿ ಟಾಸ್ಕ್ ಫೋರ್ಸ್‌ ಅನ್ನು ವಲಯ ಮಟ್ಟದ ವಲಯ ಆಯುಕ್ತರು ರವರ ನೇತೃತ್ವದಲ್ಲಿ ರಚಿಸಲಾಗಿದೆ.

ಟಾಸ್ಕ್ ಫೋರ್ಸ್ ಸಮಿತಿಯ ವಿವರ:

  1. ವಲಯ ಆಯುಕ್ತರು – ಅಧ್ಯಕ್ಷರು.
  2. ವಲಯ ಜಂಟಿ ಆಯುಕ್ತರು – ಸದಸ್ಯರು.
  3. ವಲಯ ಮುಖ್ಯ ಅಭಿಯಂತರರು – ಸದಸ್ಯರು.
  4. ವಲಯ ಸಹಾಯಕ ಸಂಚಾರ ಪೊಲೀಸ್ ಆಯುಕ್ತರು – ಸದಸ್ಯರು.
  5. ವಲಯದ ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರು – ಸದಸ್ಯರು.
  6. ವಲಯ ವ್ಯಾಪ್ತಿಗೆ ಬರುವ ಸಂಬಂಧಪಟ್ಟ ವಿಭಾಗದ ಕಾರ್ಯಪಾಲಕ ಅಭಿಯಂತರರು – ಸದಸ್ಯರು.
  7. ವಲಯ ಆಯುಕ್ತರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಉಪ ನಿಯಂತ್ರಕರು(ಹಣಕಾಸು) – ಸದಸ್ಯರ ಕಾರ್ಯದರ್ಶಿ.

ಆಯಾ ವಲಯ ವ್ಯಾಪ್ತಿಯಲ್ಲಿ ವಲಯ ಆಯುಕ್ತರನ್ನು ಒಳಗೊಂಡ ಟಾಸ್ಕ್ ಫೋರ್ಸ್ ಸಮಿತಿ ರಚಿಸಲಾಗಿದೆ.


Share It

You cannot copy content of this page