ರಾಜಕೀಯ ಸುದ್ದಿ

ರೇಟ್ ಫಿಕ್ಸ್, ಬ್ಲಾಕ್ ಮೇಲ್ ಮಾಡುವುದು ಕುಮಾರಸ್ವಾಮಿ ಗುಣ: ಡಿಸಿಎಂ ಡಿ.ಕೆ.ಶಿವಕುಮಾರ್

Share It

ಬೆಳಗಾವಿ: “ಕುಮಾರಸ್ವಾಮಿ ಅವರು ಯಾವ ರೇಟು, ಎಂತಹ ರೇಟು ಎಂದು ಹೇಳಬೇಕು. ಕುಮಾರಣ್ಣ, ರೇಟ್ ಫಿಕ್ಸ್ ಮಾಡುವ ಚಾಳಿ ನಿನಗೆ ಇರಬೇಕು. ಅದನ್ನು ಬೇರೆಯವರ ಮೇಲೆ ಹಾಕುತ್ತಿದ್ದೀರಾ. ನಾವು ರಾಜ್ಯದ ಮಹಿಳೆಯರು ಬದುಕು ಕಟ್ಟಿಕೊಳ್ಳಲು ಗ್ಯಾರಂಟಿ ನೀಡಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.

ಬೆಳಗಾವಿಯಲ್ಲಿ ಡಿಸಿಎಂ ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಸೋಮವಾರ ಮಾತನಾಡಿದರು. ಈ ವೇಳೆ ಮಾಧ್ಯಮಗಳು, “ಮಹಿಳೆಯರಿಗೆ ಡಿ.ಕೆ.ಶಿವಕುಮಾರ್ ರೇಟ್ ಫಿಕ್ಸ್ ಮಾಡುತ್ತಾರೆ, ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಜನರ ಜೇಬು ಪಿಕ್ ಪಾಕೇಟ್ ಮಾಡುತ್ತಿದೆ” ಎನ್ನುವ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ;

“ಅವನಿಗೆ ಪಿಕ್ ಪಾಕೆಟ್ ಮಾಡಿ ರೂಡಿ ಅಲ್ಲವೇ? ಹೆದರಿಸಿ, ಬೆದರಿಸಿ ಬ್ಲಾಕ್ ಮೇಲ್ ಮಾಡುವುದು, ಹಿಟ್ ಅಂಡ್ ರನ್ ಮಾಡುವುದು ಅವನ ಕೆಲಸ. ಮಹಿಳೆಯರು ತಿರುಗಿ ಬಿದ್ದಿರುವ ಕಾರಣ ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸುತ್ತಿದ್ದು ನನ್ನ ವಿರುದ್ಧ ಟೀಕಿಸುತ್ತಿದ್ದಾರೆ. ಹೆದರಿಕೊಂಡು ಪಕ್ಕದ ಜಿಲ್ಲೆಗೆ ಹೋಗಿರುವ ಮಿಸ್ಟರ್ ಕುಮಾರಸ್ವಾಮಿ, ನೀನು ಯಾವುದೇ ಕಾರಣಕ್ಕೂ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದಿಲ್ಲ” ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್ ನವರು ದೇವೇಗೌಡರನ್ನ ಅಧಿಕಾರದಿಂದ ಇಳಿಸಿದ್ದು, ಇದಕ್ಕೆ ಸಿದ್ದರಾಮಯ್ಯ ಉತ್ತರ ಕೊಡಬೇಕು ಎಂಬ ಕುಮಾರಸ್ವಾಮಿ ಆಗ್ರಹದ ಬಗ್ಗೆ ಕೇಳಿದಾಗ, “ ಅವರನ್ನು ಪ್ರಧಾನಿ ಸ್ಥಾನದಲ್ಲಿ ಕೂರಿಸಿದ್ದೇ ಕಾಂಗ್ರೆಸ್. ಅವರ ಎಲ್ಲ ಆರೋಪಗಳಿಗೆ ಉತ್ತರಿಸುತ್ತೇನೆ. ಅವರಿಗೆ ಸದನಕ್ಕೆ ಬರಲು ಹೇಳಿ” ಎಂದರು.


Share It

You cannot copy content of this page