ಚಾಮರಾಜನಗರ ಕೈ ಅಭ್ಯರ್ಥಿ ಸುನಿಲ್ ಬೋಸ್ ನಾಮಪತ್ರ ತಿರಸ್ಕಾರ?
ಚಾಮರಾನಗರ: ಸಚಿವ ಎಚ್.ಸಿ ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಚಾಮರಾನಗರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿದಿದ್ದಾರೆ. ಆದರೆ ಸುನಿಲ್ ಬೋಸ್ ಅವರ ನಾಮಪತ್ರದಲ್ಲಿ ಪ್ರಮುಖ ಮಾಹಿತಿಯನ್ನು ತಿಳಿಸಿದೇ ಮುಚ್ಚಿಟ್ಟಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿದೆ.
ಈ ಸಂಬಂಧ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು ಪ್ರಮಾಣಪತ್ರದಲ್ಲಿ ವೈವಾಹಿಕ ಜೀವನದ ಕುರಿತು ಮಾಹಿತಿ ಮರೆಮಾಚಿದ್ದಾರೆ. ಹೀಗಾಗಿ ಅವರ ನಾಮಪತ್ರವನ್ನು ತಿರಸ್ಕರಿಸುವಂತೆ ಬಿಜೆಪಿ ನಾಯಕರು ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.
ನಾಮಪತ್ರದ ಸಲ್ಲಿಕೆ ವೇಳೆ ಸುನಿಲ್ ಬೋಸ್ ಅವರು ಪ್ರಮಾಣಪತ್ರದಲ್ಲಿ ಪತ್ನಿ, ಮಕ್ಕಳ, ಕುಟುಂಬದ ಮಾಹಿತಿ ನೀಡಿಲ್ಲ ಮತ್ತು ಪತ್ನಿ, ಮಕ್ಕಳು, ತಂದೆ-ತಾಯಿ ಆಸ್ತಿ ವಿವರ ಘೋಷಿಸಿಲ್ಲ. ಹೀಗಾಗಿ ಸುನಿಲ್ ಬೋಸ್ ಅವರ ನಾಮಪತ್ರವನ್ನು ಅಸಿಂಧುಗೊಳಿಸುವಂತೆ ಚಾಮರಾಜನಗರ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜು ಅವರು ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.
ಇದೀಗ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರದ ಬಗ್ಗೆ ಬಿಜೆಪಿ ಕೆಲ ಗಂಭೀರ ಆರೋಪಗಳನ್ನು ಮಾಡಿದೆ. ಅಲ್ಲದೇ ಅವರ ನಾಮಪತ್ರ ತಿರಸ್ಕೃತ ಮಾಡುವಂತೆ ಚುನಾವಣಾಧಿಕಾರಿಗೆ ದೂರು ನೀಡಿದೆ. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ನಾಮಪತ್ರ ಪರಿಶೀಲನೆ ಮಾಡಿ ಏನೆಲ್ಲಾ ತಪ್ಪು ಇದೆಯೋ ಅಥವಾ ಕ್ರಮಬದ್ಧವಾಗಿದೆಯೋ ಎನ್ನುವುದನ್ನು ಪರಿಶೀಲನೆ ಮಾಡಿ ಬಳಿಕ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದ ಇತ್ತ ಕಾಂಗ್ರೆಸ್ನಲ್ಲಿ ನಾಯಕರಲ್ಲಿ ಆತಂಕ ಶುರುವಾಗಿದೆ.