ದಾವಣಗೆರೆ: ದಾವಣಗೆರೆಯಲ್ಲಿ ಮುಸ್ಲಿಂ ನಾಯಕರ ಅಮಾನತನ್ನು ವಾಪಸ್ ಪಡೆಯುವ ಸಾಧ್ಯತೆ ಇದೆಯೇ ಎಂದು ಕೇಳಿದಾಗ, “ನಾನು ಈ ಬಗ್ಗೆ ಏನೂ ಮಾತನಾಡುವುದಿಲ್ಲ. ಪಕ್ಷ ಈ ತೀರ್ಮಾನ ಮಾಡಿದೆ. ಸಿಎಂ ರಾಜಕೀಯ ಕಾರ್ಯದರ್ಶಿಯವರನ್ನು ಕೈಬಿಡಬೇಕಾದರೆ, ಆ ಬಗ್ಗೆ ಮುಖ್ಯಮಂತ್ರಿಯವರು ಮಾತನಾಡಿದ್ದರು. ಮುಖ್ಯಮಂತ್ರಿಗಳಿಗೆ ತಮ್ಮದೇ ಆದ ಮಾಹಿತಿ ಇರುತ್ತದೆ. ಪಕ್ಷದ ಪದಾಧಿಕಾರಿಗಳು ಮಾರ್ಗದರ್ಶನ ಮಾಡಿದ್ದಾರೆ. ಪಕ್ಷ ಅವರಿಗೆ ಕೆಲವು ಜವಾಬ್ದಾರಿಗಳನ್ನು ನೀಡಿತ್ತು. ಅದನ್ನು ಅವರು ಸರಿಯಾಗಿ ನಿಭಾಯಿಸಲಿಲ್ಲ ಅದಕ್ಕೆ ಅವರನ್ನು ಆ ಸ್ಥಾನದಿಂದ ಇಳಿಸಲಾಯಿತು. ಜಬ್ಬಾರ್ ಅವರು ತಾವಾಗಿಯೇ ರಾಜೀನಾಮೆ ನೀಡಿದ್ದರು. ಅದನ್ನು ಸ್ವೀಕಾರ ಮಾಡಿದ್ದೇವೆ ಅಷ್ಟೇ” ಎಂದರು.

ಕರೆದಾಗ ದೆಹಲಿಗೆ ಹೋಗುತ್ತೇವೆ ಸಿಎಂ, ಡಿಸಿಎಂ ದೆಹಲಿ ಭೇಟಿ ವಿಚಾರ ಕೇಳಿದಾಗ, “ಅವರು (ಹೈಕಮಾಂಡ್) ಕರೆದಾಗ ನಾವು ಹೋಗುತ್ತೇವೆ. ಕರೆಯದೇ ಹೋಗುವುದು ಸರಿಯಲ್ಲ. ಕರೆಯುತ್ತಾರೆ, ಕರೆದಾಗ ನಾವು ಹೋಗುತ್ತೇವೆ” ಎಂದರು.

ತಮಿಳುನಾಡಿನ ಹಿತ, ಜಾತ್ಯಾತೀತ ತತ್ವ ಉಳಿಯಲು ತೀರ್ಮಾನ , ತಮಿಳುನಾಡಿನಲ್ಲಿ ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿರುವ ಬಗ್ಗೆ ಕೇಳಿದಾಗ, “ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು. ಜಾತ್ಯಾತೀತ ಶಕ್ತಿಗಳು ಒಂದಾಗಿ ಇರಬೇಕು ಎಂದು ಈ ತೀರ್ಮಾನ ಮಾಡಲಾಗಿದೆ. ಎಐಡಿಎಂಕೆ, ಬಿಜೆಪಿಯವರು ಎಷ್ಟೇ ಒತ್ತಡ ಹಾಕಿದರು ಟಿವಿಕೆಯವರು ಮೈತ್ರಿ ಮಾಡಿಕೊಳ್ಳಲಿಲ್ಲ. ಜಾತ್ಯಾತೀತ ಶಕ್ತಿ ಉಳಿಯಲು, ತಮಿಳುನಾಡಿನ ಹಿತಕ್ಕಾಗಿ ನಮ್ಮ ಪಕ್ಷ ತೀರ್ಮಾನ ಮಾಡಿದೆ” ಎಂದರು.

