ವಾಲ್ಮೀಕಿ ನಿಗಮದ ಹಗರಣ ತನಿಖೆ ನಡೆಸುತ್ತಿರುವ ಕೇಂದ್ರ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ವಿರುದ್ಧವೇ ಬೆಂಗಳೂರಿನ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಾಲ್ಮೀಕಿ ಹಗರಣದ ತನಿಖೆ ನಡೆಸುತ್ತಿರುವ ಇ.ಡಿ ಅಧಿಕಾರಿಗಳೇ ತಮ್ಮ ಮೇಲೆ ಒತ್ತಡ ಹೇರಿ ಬಂಧಿತ ಮಾಜಿ ಸಚಿವ ಬಿ.ನಾಗೇಂದ್ರ ಅವರ ಒತ್ತಡದಿಂದ ವಾಲ್ಮೀಕಿ ನಿಗಮದ ಅನುದಾನದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವುದಾಗಿ ಒಪ್ಪಿಕೊಳ್ಳಲು ಹೇಳಿದ್ದಾರೆ.
ಹಾಗೂ ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ವಾಲ್ಮೀಕಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಬಿ.ಕಲ್ಲೇಶ್ ಅವರು ವಿಲ್ಸನ್ ಗಾರ್ಡನ್ ಠಾಣೆಗೆ ದೂರು ನೀಡಿದ್ದಾರೆ. ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಬಿ.ಕಲ್ಲೇಶ್ ದೂರು ಸ್ವೀಕರಿಸಿ ಇಬ್ಬರು ಇ.ಡಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ..