ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಏರಿಕೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರವನ್ನು ಏರಿಕೆ ಮಾಡುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಪ್ರಶ್ನಿಸಿದಾಗ ಅವರು ಹೇಳಿದ್ದಿಷ್ಟು, ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರವನ್ನು ಏರಿಸುವ ಬಗ್ಗೆ ಸಾರಿಗೆ ಇಲಾಖೆಯ ಬಿಎಂಟಿಸಿ, ಕೆ.ಎಸ್.ಆರ್.ಟಿ.ಸಿ, ವಾಯುವ್ಯ, ಈಶಾನ್ಯ ಸಾರಿಗೆ ವಿಭಾಗಗಳು ಮೊದಲು ಪ್ರಸ್ತಾವನೆ ಸಲ್ಲಿಸಬೇಕು.
ಆದರೆ ಈವರೆಗೂ ಯಾವುದೇ ಸಾರಿಗೆ ನಿಗಮವೂ ಈವರೆಗೆ ಬಸ್ ಪ್ರಯಾಣ ದರ ಏರಿಕೆ ಮಾಡಬೇಕೆಂದು ಪ್ರಸ್ತಾವನೆ ಸಲ್ಲಿಸಿಲ್ಲ, ಆದ್ದರಿಂದ ಸದ್ಯ ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಇಲ್ಲ, ಆದರೆ ಪ್ರತಿ 4 ವರ್ಷಗಳಿಗೊಮ್ಮೆ ಸಾರಿಗೆ ಬಸ್ ಪ್ರಯಾಣ ದರ ಏರಿಸಲಾಗುತ್ತದೆ. ಅದರಂತೆ ಕಳೆದ 2020 ರಲ್ಲಿ ಸಾರಿಗೆ ಬಸ್ ಪ್ರಯಾಣ ದರವನ್ನು ಏರಿಸಲಾಗಿತ್ತು. ಈಗ ಬಸ್ ಪ್ರಯಾಣ ದರವನ್ನು ಏರಿಸುವ ಬಗ್ಗೆ ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಿದರೆ ದರ ಏರಿಕೆ ಮಾಡುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದರು.

