ಬೆಂಗಳೂರು: ಇಂದು(ಸೋಮವಾರ) ರಾತ್ರಿಯಿಂದಲೇ ರಾಜ್ಯದಲ್ಲಿ ಆಂಬುಲೆನ್ಸ್ ಸೇವೆಗಳು ಸ್ಥಗಿತಗೊಳ್ಳಲಿವೆ.
3 ತಿಂಗಳ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಇಂದು (ಸೋಮವಾರ) ರಾತ್ರಿ 8 ಗಂಟೆಯಿಂದ ಆರೋಗ್ಯ ಕವಚ 108 ಆಂಬುಲೆನ್ಸ್ ಸೇವೆಗಳನ್ನು ಸ್ಥಗಿತಗೊಳಿಸಲು ಸಿಬ್ಬಂದಿ ಸಜ್ಜಾಗಿದ್ದಾರೆ.
108 ಆಂಬುಲೆನ್ಸ್ ಸೇವೆಯ ಉಸ್ತುವಾರಿ ವಹಿಸಿಕೊಂಡಿರುವ ಜಿವಿಕೆ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಿಬ್ಬಂದಿಗಳು ಅಕ್ರೋಶ ವ್ಯಕ್ತಪಡಿಸಿ ಸೋಮವಾರ ರಾತ್ರಿಯಿಂದ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ ಎಂದು 108 ಅಂಬುಲೆನ್ಸ್ ನೌಕರರ ಸಂಘದ ಉಪಾಧ್ಯಕ್ಷ ದಯಾನಂದ್ ತಿಳಿಸಿದ್ದಾರೆ.
ಒಂದೆಡೆ 3 ತಿಂಗಳಿಂದ ಸಂಬಳವಿಲ್ಲ, ಮತ್ತೊಂದು ಕಡೆ ವೇತನ ಕಡಿತಗೊಳಿಸಲಾಗಿದೆ. ಹೀಗಾಗಿ ಜಿವಿಕೆ ಸಂಸ್ಥೆಯ ನಿರ್ಧಾರ ವಿರೋಧಿಸಿ ನಾವು ಅನಿವಾರ್ಯವಾಗಿ ಹೋರಾಟಕ್ಕಿಳಿಯಲು ತೀರ್ಮಾನಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.