ಉಪಯುಕ್ತ ಸುದ್ದಿ

110 ಹಳ್ಳಿಗಳೀಗೆ ಕುಡಿಯುವ ನೀರು ಪೂರೈಕೆಗೆ 4336 ಕೋಟಿ ರು.ಗಳ ಯೋಜನೆ

Share It

ಬೆಂಗಳೂರು: ಬೆಂಗಳೂರು ನೀರು ಸರಬರಾಜಿಗೆ ಹೆಚ್ಚುವರಿ ಬಲ ನೀಡಲು ಸರಕಾರ ತೀರ್ಮಾನಿಸಿದ್ದು, 110 ಹಳ್ಳಿಗಳ ಕುಡಿಯುವ ನೀರಿನ ವ್ಯವಸ್ಥೆಗೆ ಅನುಮೋದನೆ ಸಿಕ್ಕಿದೆ. ಇದಕ್ಕಾಗಿ ಸರಕಾರ 4336 ಕೋಟಿ ರು.ಗಳ ಯೋಜನೆಗೆ ಸೆ.16 ಕ್ಕೆ ಚಾಲನೆ ಸಿಗಲಿದೆ.

ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಆಪರೇಷನ್ ಆಜೆನ್ಸಿ) ಸಹಭಾಗಿತ್ವದಲ್ಲಿ ಯೋಜನೆ ಜಾರಿಯಾಗಲಿದ್ದು, ಹೆಚ್ಚುವರಿಯಾಗಿ 775 ಎಂಎಲ್‌ಡಿ ನೀರು ಪೂರೈಕೆಯಾಗಲಿದೆ. ಇದರಿಂದ ಬೆಂಗಳೂರಿನ ಹೊಸದಾಗಿ ಬಿಬಿಎಂಪಿಗೆ ಸೇರ್ಪಡೆಯಾದ 110 ಹಳ್ಳಿಗಳ ವ್ಯಾಪ್ತಿಯ ಕುಡಿಯುವ ನೀರಿನ ಪೂರೈಕೆಗೆ ಹೊಸ ಬಾಷ್ಪ ಬರೆದಂತಾಗಿದೆ.

ಈ ಯೋಜನೆಯಿಂದ 50 ಲಕ್ಷ ಜನರಿಗೆ ನೀರಿನ ಪೂರೈಕೆ ಮಾಡಲು ಅವಕಾಶವಾಗಲಿದೆ. ಯೋಜನೆಯಿಂದ ಯಶವಂತಪುರ, ರಾಜರಾಜೇಶ್ವರಿ ನಗರ, ಬ್ಯಾಟರಾಯನಪುರ, ಬೆಂಗಳೂರು ದಕ್ಷಿಣ, ದಾಸರಹಳ್ಳಿ, ಕೆ.ಆರ್.ಪುರ, ಬೊಮ್ಮನಹಳ್ಳಿ, ಮಹದೇವಪುರ ವಿಧಾನಸಭಾ ಕ್ಷೇತ್ರಗಳಿಗೆ ಅನುಕೂಲವಾಗಲಿದೆ.

ಸೆ. 16 ರಂದು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯ ಜಲಮಂಡಳಿ ಆವರಣದಲ್ಲಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಜಲಸಂಪನ್ಮೂಲ ಸಚಿವ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಸ್ಥಳೀಯ ಶಾಸಕ ನರೇಂದ್ರ ಸ್ವಾಮಿ ಹಾಗೂ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.


Share It

You cannot copy content of this page