ಬೆಳಗಾವಿಯಲ್ಲಿ ಕಾರಿನ ಮೇಲೆ ಬಿದ್ದ ಲಾರಿ

Share It

ಬೆಳಗಾವಿ : ಬೆಳಗಾವಿ ಕೆಎಲ್‌ಇ ಆಸ್ಪತ್ರೆ ಸನಿಹದ ರಾಷ್ಟ್ರೀಯ ಹೆದ್ದಾರಿ ಪಕ್ಕದ ರಸ್ತೆಯಲ್ಲಿ ಲಾರಿಯೊಂದು ಕಾರಿನ ಮೇಲೆ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಒಬ್ಬರನ್ನು ಹೊರ ತೆಗೆಯಲಾಗಿದೆ. ಇನ್ನಿಬ್ಬರ ರಕ್ಷಣಾ ಕಾರ್ಯಾಚರಣೆ ನಡೆಸಿ ಹೊರ ತೆಗೆಯಲಾಯಿತು.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಷದ ಸರ್ವೀಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಕಾಂಕ್ರೀಟ್ ಮಿಕ್ಸರ್ ಲಾರಿ ವೇಗವಾಗಿ ಚಲಿಸುತ್ತಿದ್ದ ವೇಳೆ ಪಕ್ಕದ ಕಾರಿನ ಮೇಲೆ ಉರುಳಿಬಿದ್ದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ರಕ್ಷಿಸಲು ಮುಂದಾಗಿದ್ದಾರೆ.

ಘಟನೆ ವಿವರ : ರಸ್ತೆ ಪಕ್ಕದಲ್ಲಿ ನಿಂತಿದ್ದ ಕಾರ್‌ನ ಮೇಲೆ ಕಾಂಕ್ರಿಟ್‌ ಮಿಕ್ಸರ್‌ ಲಾರಿ ಉರುಳಿಬಿದ್ದಿದೆ. ಬೆಳಗಾವಿಯಲ್ಲಿ ನಡೆದ ಈ ಅಪಘಾತದಲ್ಲಿ ಕಾರ್‌ನ ಮೇಲೆ ಕಾಂಕ್ರಿಟ್‌ ಮಿಕ್ಸರ್‌ ಲಾರಿ ಬಿದ್ದರೂ, ಕಾರ್‌ನಲ್ಲಿದ್ದ ಇಬ್ಬರು ವಾಡಸದೃಶ್ಯವಾಗಿ ಪಾರಾಗಿದ್ದಾರೆ. KA25 MD 6506 ಸಂಖ್ಯೆಯ ಕಾರ್ ಮೇಲೆ ಕ್ಯಾಂಟರ್ ಬಿದ್ದಿದ್ದು, ಎಲ್ಲರೂ ಸಾವಿನಿಂದ ಪಾರಾಗಿದ್ದಾರೆ.

ಕಾರಿನ ಒಳಗೆ ಇಬ್ಬರು ಪ್ರಯಾಣಿಕರು ಸಿಕ್ಕಿಕೊಂಡಿರುವ ಮಾಹಿತಿ ಸಿಕ್ಕ ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭವಾಗಿತ್ತು. ಬೆಳಗಾವಿಯ ಕೆ.ಎಲ್.ಇ ಬಳಿಯ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಷದ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ. ಕಾರಿನಲ್ಲಿ ಇದ್ದವರನ್ನು ರಕ್ಷಿಸಲು ದೊಡ್ಡ ಮಟ್ಟದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯಿತು. ಕ್ರೇನ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.

ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಪ್ರಯಾಣಿಕರು ಪಾರಾದ ರೀತಿಗೇ ಜನರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಅಶೋಕ್‌ ಲೇಲ್ಯಾಂಡ್‌ ಕಂಪನಿಯ ಕಾಂಕ್ರಿಟ್‌ ಲಾರಿ ಬಿದ್ದ ರಭಸಕ್ಕೆ ಇಡೀ ಕಾರು ಸಂಪೂರ್ಣವಾಗಿ ಜಖಂ ಆಗಿದೆ. ಈ ವೇಳೆ ಕಾರ್‌ನ ಒಳಗಡೆಯ ಇಬ್ಬರು ಪ್ರಯಾಣಿಕರಿದ್ದರು. ಘಟನೆ ನಡೆದ ಬೆನ್ನಲ್ಲಿಯೇ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ನಡೆಸಿದ್ದರು.

ರಕ್ಷಣೆಗೆ ಒಳಗಾದ ಮೂವರ ಪೈಕಿ ಇಬ್ಬರನ್ನು ಪರಪ್ಪ ಬಾಳಿಕಾಯಿ, ನಿಂಗಪ್ಪ ಕೊಪ್ಪದ ಎಂದು ಗುರುತಿಸಲಾಗಿದೆ. ಧಾರವಾಡದಿಂದ ಬೆಳಗಾವಿಗೆ ಬರುವಾಗ ಈ ಘಟನೆ ನಡೆದಿದೆ. ಸಂಬಂಧಿಗಳ ಆಗಮನಕ್ಕಾಗಿ ಸರ್ವೀಸ್ ರಸ್ತೆ ಬದಿ ಕಾರು ಪಾರ್ಕ್ ಮಾಡಿ ಕಾಯುತ್ತಿದ್ದರು ಎನ್ನಲಾಗಿದೆ.

ಕೇವಲ 15 ನಿಮಿಷದಲ್ಲೇ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಸ್ಥಳೀಯ ಜನರು, ಎರಡು ಕ್ರೇನ್ ಬಳಸಿ ಕಾರ್‌ನಲ್ಲಿದ್ದವರನ್ನು ರಕ್ಷಿಸಲಾಗಿದೆ. ಲಾರಿಯನ್ನು ಮೊದಲಿಗೆ ಕ್ರೇನ್‌ ಮೂಲಕ ಮೇಲೆತ್ತಲಾಗಿದೆ. ಅನಂತರ ಲಾರಿ ಅಡಿಯಲ್ಲಿದ್ದ ಕಾರನ್ನು ಸಾರ್ವಜನಿಕರು ಹೊರಗೆ ತೆಗೆದಿದ್ದಾರೆ. ಇಬ್ಬರನ್ನೂ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಲಾಗಿದೆ.


Share It

You May Have Missed

You cannot copy content of this page