ಚಿತ್ರದುರ್ಗ: ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸೆ.24ರಂದು ಮಂಗಳವಾರ ಸಂಜೆ 6 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಲಿದ್ದಾರೆ.
ಈ ಸಭೆಯಲ್ಲಿ ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಸೇರಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಪಾಲ್ಗೊಳ್ಳಲಿದ್ದಾರೆ.

