ಚಿಕ್ಕಮಗಳೂರು: ಜಾತ್ರೆಯ ವೇಳೆಯಲ್ಲಿ ಗಾಡಿ ಓಡಿಸುವಾಗ ವ್ಯಕ್ತಿಯೊಬ್ಬರ ಮೇಲೆ ಎತ್ತಿನ ಗಾಡಿ ಹರಿದು ಸಾವನ್ನಪ್ಪಿರುವ ಘಟನೆ ಚಿಕ್ಕಂಗಳೂರು ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಸಮೀಪದ ಗಡೀಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಊರಿನ ಜಾತ್ರೆಯ ಸಂದರ್ಭದಲ್ಲಿ ಎತ್ತಿನ ಗಾಡಿ ಓಡಿಸುವ ಸ್ಪರ್ಧೆ ನಡೆಯುತ್ತಿತ್ತು. ಈ ವೇಳೆ ವಿಡಿಯೋ ಮಾಡುತ್ತಿದ್ದ ರವಿ ಎಂಬ ೪೦ ವರ್ಷದ ವ್ಯಕ್ತಿಯ ಮೇಲೆ ಇದ್ದಕ್ಕಿದ್ದಂತ ಓಡಿ ಬಂದ ಎತ್ತಿನ ಗಾಡಿ ಹರಿದಿದೆ.
ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಯಿತಾದರೂ, ರವಿ ಸಾವನ್ನಪ್ಪಿದ್ದಾರೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

