ಅಪರಾಧ ರಾಜಕೀಯ ಸುದ್ದಿ

ಮೈಕ್ರೋ ಫೈನಾನ್ಸ್ ಹಾವಳಿ: ಕಿರುಕುಳ ಕೊಟ್ಟವರಿಗೆ 3 ವರ್ಷ ಜೈಲು !

Share It

ಬೆಂಗಳೂರು: ಮೈಕ್ರೋ ಫೈನಾನ್ಸ್ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿರುವ ಸರಕಾರ ಸಾಲ ವಸೂಲಾತಿ ದೌರ್ಜನ್ಯ ಮತ್ತು ಕಿರುಕುಳ ನಡೆಸಿದರೆ ೩ ವರ್ಷ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೊಳಿಸಲು ಮುಂದಾಗಿದೆ.

ಈಗಾಗಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆ ಜಾರಿಗೆ ಒಪ್ಪಿಗೆ ಸಿಕ್ಕಿದೆ. ಹಿರಿಯ ಸಚಿವರ ಜತೆಗೆ ಸಿಎಂ ಸಿದ್ದರಾಮಯ್ಯ ಸಮಾಲೋಚನೆ ನಡೆಸಿದ್ದು, ಮಸೂದೆ ಕುರಿತು ಅಂತಿಮ ತೀರ್ಮಾನ ತೆಗೆದುಕೊಂಡಿದ್ದಾರೆ.

ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಗೆ ಕೇವಲ ದಂಡ ವಿಧಿಸಿದರೆ, ದಂಡ ಕಟ್ಟಿ ಪಾರಾಗುತ್ತಾರೆ. ಹೀಗಾಗಿ, ಕಿರುಕುಳ ಸಾಭೀತಾದರೆ ಮೂರು ವರ್ಷಗಳ ಜೈಲುವಾಸ ವಿಧಿಸುವ ಕಾನೂನು ಜಾರಿಗೆ ಚಿಂತನೆ ನಡೆಸಿದೆ.

ಮೈಕ್ರೋ ಫೈನಾನ್ಸ್ ದಂಧೆಕೋರರ ಹಾವಳಿ ತಡೆಗೆ ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡುವ ಕುರಿತು ಚಿಂತನೆ ನಡೆದಿದೆ. ಒಟ್ಟಾರೆ ಸಾರ್ವಜನಿಕರ ಹಿತಾಸಕ್ತಿ ಕಾಯಲು ಸರಕಾರ ಬದ್ಧವಾಗಿದೆ ಎಂಬ ಸಂದೇಶವನ್ನು ಸರಕಾರ ನೀಡಿದ್ದು, ಶೀಘ್ರವೇ ಅಂತಿಮ ನಿರ್ಧಾರ ಹೊರಬೀಳಲಿದೆ.


Share It

You cannot copy content of this page