ಬೆಂಗಳೂರು: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆ ಮೇಳೆ ದಾಳಿ ನಡೆಸಿದ್ದು, ಕೋಟ್ಯಂತರ ರು. ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಳ್ಳಂಬೆಳಗ್ಗೆಯೇ ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಹೂಲಗೇರಿ ಪಿಡಿಒ ಎಸ್‌ಪಿ ಹಿರೇಮಠ ಅವರ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಮನೆಯಲ್ಲಿ ಕೋಟ್ಯಂತರ ರು. ಬೆಲೆಬಾಳುವ ಚಿನ್ನಾಭರಣ ಮತ್ತು ನಗದು ಸಿಕ್ಕಿದೆ ಎಂದು ಹೇಳಲಾಗುತ್ತಿದೆ.
ಹಾರೋಗೇರಿ ವೆಟರ್ನರಿ ಇನ್ಸ್ಪೆಕ್ಟರ್ ಸಂಜಯ್ ಮನೆ ಮೇಲೂ ದಾಳಿ ನಡೆದಿದೆ. ರಾಯಭಾಗದ ಮನೆಯ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಿಗಿದ್ದಾರೆ.
ಬೆಳಗಾವಿಯ ಪ್ರಭಾರಿ ಸಬ್ ರಿಜಿಸ್ಟಾರ್ ಸಚ್ಚಿನ್ ಮಂಡೇದ್ ಮನೆಯ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Updating…