ಪ್ರಯಾಗ್ ರಾಜ್: ಕಾಲ್ತುಳಿತ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರು. ಪರಿಹಾರ ನೀಡುವುದಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ ಮಾಡಿದ್ದಾರೆ.
ಮೌನಿ ಅಮವಾಸ್ಯೆ ಹಿನ್ನೆಲೆಯಲ್ಲಿ ಆಯೋಜನೆಯಾಗಿದ್ದ ಕುಂಭಸ್ನಾನದಲ್ಲಿ ಮುಂಜಾವಿನಲ್ಲಿ ಕಾಲ್ತುಳಿತ ಉಂಟಾಗಿ 30ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತರ ಕುಟುಂಬಕ್ಕೆ 25 ಲಕ್ಷ ರು. ಪರಿಹಾರ ನೀಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ.
ಗಾಯಾಳುಗಳಿಗೆ ಚಿಕಿತ್ಸೆಯ ವೆಚ್ಚವನ್ನು ಸರಕಾರವೇ ಭರಿಸಲು ತೀರ್ಮಾನಿಸಿದೆ. ಕರ್ನಾಟಕದ ನಾಲ್ವರು ಸೇರಿ 30 ಜನ ಭಕ್ತರು ಕಾಲ್ತುಳಿತದಲ್ಲಿ ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯೂ ಇದೆ.