ರಾಮನಗರ: ಮೆಕ್ರೋ ಪೈನಾನ್ಸ್ ಸಆಲ ವಸೂಲಾತಿ ನೆಪದಲ್ಲಿ ಕಿರುಕುಳ ನೀಡಿದ ಆರೋಪದಲ್ಲಿ ಹಣಕಾಸು ಸಂಸ್ಥೆಯ ಮ್ಯಾನೇಜರ್ ಒಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಖಾಸಗಿ ಫೈನಾನ್ಸ್ ಸಂಸ್ಥೆಯ ಬ್ರಾಂಚ್ ಮ್ಯಾನೇಜರ್ ನನ್ನು ವಶಕ್ಕೆ ಪಡೆದು ಜೈಲಿಗೆ ಕಳುಹಿಸಿದ್ದಾರೆ.
ರಾಮನಗರ ತಾಲೂಕಿನ ಕೂನಮುದ್ದನಹಳ್ಳಿ ಗ್ರಾಮಕ್ಕೆ ಬಂದು, ೭-೮ ಜನರಿರುವ ಗುಂಪನ್ನು ಮಾಡಿ, ನಾವು ನಿಮಗೆ ಸಾಲ ನೀಡುತ್ತೇವೆ ಎಂದು ಹೇಳಿದ್ದು, ಅದರಂತೆ ಸಾಲ ನೀಡಿದ್ದರು. ಕೆಲ ದಿನದ ನಂತರ ಸಾಲ ಪಾವತಿಗೆ ಕಷ್ಟವಾದ ಕಾರಣ ಬ್ರಾಂಚ್ ಮ್ಯಾನೇಜರ್ ಸೇರಿ ಅನೇಕರು ಮನೆಯ ಬಳಿ ಬಂದು ಗಲಾಟೆ ಮಾಡಿದ್ದರು ಎನ್ನಲಾಗಿದೆ.
ಈ ಸಂಬAಧ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಫೈನಾನ್ಸ್ ಸಂಸ್ಥೆಯ ಮ್ಯಾನೇಜರ್ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Join whitePaper
https://chat.whatsapp.com/KDvvEeQq26vBPfTaIGaDuJ