ಉಪಯುಕ್ತ ಸುದ್ದಿ

ಬಿಎಂಟಿಸಿ ಸಿಬ್ಬಂದಿಗೆ ಗುಡ್ ನ್ಯೂಸ್: 1.5 ಕೋಟಿ ಜೀವವಿಮೆ

Share It

ಬೆಂಗಳೂರು: ಬಿಎಂಟಿಸಿ ಉದ್ಯೋಗಿಗಳಿಗೆ ಸರಕಾರ ಗುಡ್‌ನ್ಯೂಸ್ ನೀಡಿದ್ದು, ಅಪಘಾತದಲ್ಲಿ ಮೃತಪಟ್ಟವರಿಗೆ 1.5 ಕೋಟಿ ವಿಮಾ ಸೌಲಭ್ಯ ನೀಡುವ ಒಪ್ಪಂದಕ್ಕೆ ಬಿಎಂಟಿಸಿ ಮತ್ತು ಕೆನರಾ ಬ್ಯಾಂಕ್ ಸಹಿ ಹಾಕಿವೆ.

ಕೆನರಾ ಬ್ಯಾಂಕ್ ನೊಂದಿಗೆ ರೂ. 150 ಕೋಟಿ ಅಪಘಾತ ಪರಿಹಾರ ವಿಮಾ ಯೋಜನೆಯ ಒಡಂಬಡಿಕೆ ಮತ್ತು ಮೃತಾವಲಂಬಿತರಿಗೆ ರೂ. 1 ಕೋಟಿ ವಿಮಾ ಪರಿಹಾರ ಮೊತ್ತದ ಚೆಕ್ ವಿತರಣಾ ಕಾರ್ಯಕ್ರಮವನ್ನು ಬಿಎಂಟಿಸಿ ಆಯೋಜಿಸಿದ್ದು, ಸಚಿವ ರಾಮಲಿಂಗಾ ರೆಡ್ಡಿ ಪರಿಹಾರದ ಚೆಕ್ ವಿತರಣೆ ಮಾಡಿದರು.

ಪ್ರತಿ ದಿನ ಸರಾಸರಿ 40 ಲಕ್ಷ ಪ್ರಯಾಣಿಕರು ಸಂಸ್ಥೆಯ ಸಾರಿಗೆ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ. ನಗರದಲ್ಲಿ ವಾಯುಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಪ್ರಸ್ತುತ 1279 ಎಲೆಕ್ನಿಕ್ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ ಹಾಗೂ ಮುಂದಿನ ದಿನಗಳಲ್ಲಿ 352 ಎಲೆಕ್ನಿಕ್ ಬಸ್ಸುಗಳನ್ನು ಸೇರ್ಪಡೆಗೊಳಿಸಲು ಯೋಜಿಸಲಾಗಿದೆ. ಪ್ರಸ್ತುತ ಒಟ್ಟು 6158 ವಾಹನಗಳನ್ನು ಹೊಂದಿದ್ದು, ಪರಿಸರಸ್ನೇಹಿ ಹಾಗೂ ವಾಯುಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲೆಕ್ನಿಕ್ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ಬಿಎಂಟಿಸಿ ಕೆನರಾ ಬ್ಯಾಂಕ್ ಜತೆಗೆ ಮೂರು ವರ್ಷಗಳ ಅವಧಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಒಡಂಬಡಿಕೆ ಅನ್ವಯ ಬ್ಯಾಂಕ್‌ನಲ್ಲಿ ವೇತನ ಖಾತೆ ಹೊಂದಿರುವ ಅಧಿಕಾರಿ/ನೌಕರರು ಅಪಘಾತ (ಕರ್ತವ್ಯ ನಿರತ ಅಥವಾ ವೈಯಕ್ತಿಕ ಅಪಘಾತ ಸೇರಿದಂತೆ) ಮೃತಪಟ್ಟಲ್ಲಿ, ಅವರ ನಾಮನಿರ್ದೇಶಿತರಿಗೆ ರೂ. 1 ಕೋಟಿ ವಿಮಾ ಪರಿಹಾರ ಮೊತ್ತವನ್ನು ಪಾವತಿಸುವ ಯೋಜನೆ ಜಾರಿಗೆ ತರಲಾಗಿದೆ. ಅದರಂತೆ, ಸಂಸ್ಥೆಯು 50 ಲಕ್ಷ ರೂಪಾಯಿಗಳನ್ನು ಸಹ ನೀಡುತ್ತಿದ್ದು, ಒಟ್ಟು 1.5 ಲಕ್ಷ ರೂಪಾಯಿಗಳನ್ನು ಮೃತ ಸಿಬ್ಬಂದಿ ಕುಟುಂಬಕ್ಕೆ ನೀಡಲಾಗುವುದು.

ಸಂಸ್ಥೆಯು ಕೆನರಾ ಬ್ಯಾಂಕ್‌ನೊAದಿಗೆ ಮೂರು ವರ್ಷಗಳ ಅವಧಿಗೆ ಒಡಂಬಡಿಕೆಯನ್ನು ಮಾಡಿಕೊಂಡಿದ್ದು, ಈ ಒಡಂಬಡಿಕೆಯನ್ವಯ ಬ್ಯಾಂಕ್ ನಲ್ಲಿ ವೇತನ ಖಾತೆ ಹೊಂದಿರುವ ಅಧಿಕಾರಿ/ನೌಕರರು ಅಪಘಾತ (ಕರ್ತವ್ಯ ನಿರತ ಅಥವಾ ವೈಯಕ್ತಿಕ ಅಪಘಾತ ಸೇರಿ) ಮೃತಪಟ್ಟಲ್ಲಿ, ಅವರ ನಾಮನಿರ್ದೇಶಿತರಿಗೆ ರೂ. 1 ಕೋಟಿ ವಿಮಾ ಪರಿಹಾರ ಮೊತ್ತವನ್ನು ಪಾವತಿಸುವ ಯೋಜನೆಯನ್ನು ಜಾರಿಗೆ ತರಲಾಗಿದೆ.

ಅದರಂತೆ, ಸಂಸ್ಥೆಯು 50 ಲಕ್ಷ ರೂಪಾಯಿಗಳನ್ನು ಸಹ ನೀಡುತ್ತಿದ್ದು, ಒಟ್ಟು 1.5 ಲಕ್ಷ ರೂಪಾಯಿಗಳನ್ನು ಮೃತ ಸಿಬ್ಬಂದಿಗಳ ಕುಟುಂಬಕ್ಕೆ ನೀಡಲಾಗುವುದು. ಇಂದು 4 ಜನ ಮೃತಾವಲಂಬಿತರಿಗೆ ಈ ದಿನ ರೂ.1 ಕೋಟಿ ಚೆಕ್ ವಿತರಿಸುತ್ತಿದ್ದೇವೆ. 5 ಜನ ಮೃತಾವಲಂಬಿತರಿಗೆ ಸಂಸ್ಥೆಯ ಗುಂಪು ವಿಮಾ ಯೋಜನೆಯಡಿಯಲ್ಲಿ ತಲಾ ರೂ.10 ಲಕ್ಷಗಳನ್ನು ಈ ದಿನ ವಿತರಿಸುತ್ತಿದ್ದೇವೆ ಎಂದು ತಿಳಿಸಿದರು.


Share It

You cannot copy content of this page