ಹೈದರಾಬಾದ್ : ಶ್ರೀಶೈಲಂ ಎಡದಂಡೆ ಕಾಲುವೆಯ ಸುರಂಗ ಮಾರ್ಗ ಕುಸಿದು ಎಂಟು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಾಗರ್ ಕರ್ನೂಲ್‌ನಲ್ಲಿ ನಡೆದಿದೆ.
ನಾಗರ್ ಕರ್ನೂಲ್ ಜಿಲ್ಲೆಯ ದೋಮಲಪೆಂಟಾದಲ್ಲಿ ಘಟನೆ ನಡೆದಿದ್ದು, ಸುರಂಗದ ಒಳಗೆ ಇನ್ನೂ ಸುಮಾರು ಏಳು ಜನರು ಸಿಲುಕಿರುವ ಶಂಕೆಯಿದೆ. ಅವರ ರಕ್ಷಣೆಗೆ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ರೋಚಕ ಕಾರ್ಯಾಚರಣೆ ನಡೆಸುತ್ತಿವೆ.
ಘಟನೆಯಲ್ಲಿ ನಲ್ವತ್ತಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದು, ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದು, ರಕ್ಷಣಾ ಕಾರ್ಯಕ್ಕೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.