ಡಿನೋಟಿಫಿಕೇಶನ್ ಪ್ರಕರಣ: ಕೇಂದ್ರ ಸಚಿವ ಕುಮಾರಸ್ವಾಮಿ ಅರ್ಜಿ ವಜಾಗೊಳಿಸಿದ ಸುಪ್ರೀಂ!

Share It

ನವದೆಹಲಿ: ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿನೋಟಿಷಿಕೇಷನ್ ಸಂಬಂಧ ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿದ್ದು, ಇದನ್ನು ಹೈಕೋರ್ಟ್​ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟ್​ ಎಚ್​​ಡಿಕೆ ಅರ್ಜಿ ವಜಾಗೊಳಿಸಿದೆ.

ಕುಮಾರಸ್ವಾಮಿ ಸಿಎಂ ಆಗಿದ್ದಾಗ ಬನಶಂಕರಿ ಬಳಿಯ ಹಲಗೆವಡೇರಹಳ್ಳಿ ಸರ್ವೆ ನಂ. 128, 137 ರಲ್ಲಿನ 2 ಎಕರೆ 24 ಗುಂಟೆ ಜಮೀನನ್ನು ಕಾನೂನುಬಾಹಿರವಾಗಿ ಡಿ ನೋಟಿಫಿಕೇಷನ್ ಮಾಡಿದ ಆರೋಪ ಕೇಳಿಬಂದಿತ್ತು. ಈ ಕುರಿತ ದಾಖಲೆಗಳ ಸಮೇತ ಮಹದೇವಸ್ವಾಮಿ 2012ರಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

ಕುಮಾರಸ್ವಾಮಿ ಜೊತೆಗೆ ಪದ್ಮಾ, ಶ್ರೀದೇವಿ, ಚೇತನ್‌ಕುಮಾರ್‌, ಕೆ.ಬಿ ಶಾಂತಮ್ಮ, ಎಸ್‌.ರೇಖಾಚಂದ್ರು, ಯೋಗಮೂರ್ತಿ, ಬಿ.ನರಸಿಂಹಲುನಾಯ್ಡು, ಆರ್‌. ಬಾಲಕೃಷ್ಣ, ಟಿ. ಮುರುಳಿಧರ್‌, ಜಿ. ಮಲ್ಲಿಕಾರ್ಜುನ, ಇ.ಎ ಯೋಗೇಂದ್ರನಾಥ, ಪಿ.ಜಗದೀಶ, ಡಿ.ಎಸ್‌ ದೀಪಕ್‌, ಎಂ.ಸುಬ್ರಮಣಿ, ಬಾಲಾಜಿ ಇನ್ಫ್ರಾ, ಶುಭೋದಯ ಬಿಲ್ಡರ್ಸ್‌, ಸನ್‌ರೈಸ್‌ ಬಿಲ್ಡರ್ಸ್‌ ಮತ್ತು ಆರತಿ ಡೆವಲಪರ್ಸ್‌ ಪ್ರಮುಖರು ಆರೋಪಿತರಾಗಿದ್ದಾರೆ.

ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದ್ದರು. ಅದನ್ನು ದೂರುದಾರ ಮಹಾದೇವಸ್ವಾಮಿ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ಬಿ ರಿಪೋರ್ಟ್‌ ತಿರಸ್ಕರಿಸಿ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು.

ಇದನ್ನು ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಆದ್ರೆ, ಇದೀಗ ಸುಪ್ರೀಂಕೋರ್ಟ್​ ಎಚ್​​ಡಿಕೆ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದಾಗಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಗೆ ಹಿನ್ನಡೆಯಾಗಿದೆ.


Share It

You May Have Missed

You cannot copy content of this page