ಹಾವೇರಿ: ಸಂಘದಲ್ಲಿ ಮಾಡಿಕೊಂಡಿದ್ದ 3 ಲಕ್ಷ ಸಾಲಕ್ಕೆ ಬೆದರಿ ತನ್ನಿಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯ ಹಳೇರಿತ್ತಿ ಗ್ರಾಮದ ನಾಗೇಶ್ ಎಂಬಾತ ವಿವಿಧ ಸಂಘಗಳಲ್ಲಿ 3 ಲಕ್ಷ ರುಪಾಯಿ ಸಾಲ ಮಾಡಿಕೊಂಡಿದ್ದ. ಸಂಘದ ಮ್ಯಾನೇಜರ್ಗಳ ಕಾಟಕ್ಕೆ ಬೇಸತ್ತು, ತನೊಂದಿಗೆ ತನ್ನಿಬ್ಬರು ಮಕ್ಕಿಗೂ ವಿಷ ಕುಡಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾನೆ.
ಹಿರೇಗುತ್ತಿ ಗ್ರಾಮದ ಹೊರವಲಯದಲ್ಲಿ ತನ್ನಿಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾನು ವಿಷ ಕುಡಿದು ಪ್ರಜ್ಞೆ ತಪ್ಪಿ ಬಿದ್ದಿದ್ದವರನ್ನು ಗಮನಸಿದ ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ಸೇರಿಸಿದ್ದಾರೆ. ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುತ್ತಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.