ಗೋವಾ: ಕಬಾಲಿ ಚಿತ್ರದ ನಿರ್ಮಾಪಕ ಹಾಗೂ ಡ್ರಗ್ಸ್ ಪೆಡ್ಲರ್ ಕೆ.ಪಿ.ಚೌಧರಿ ಗೋವಾದ ಹೋಟೆಲ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಜನೀಕಾAತ್ ಅಭಿನಯದ ಕಬಾಲಿ ಸೇರಿದಂತೆ ಅನೇಕ ಚಿತ್ರಗಳನ್ನು ನಿರ್ಮಾಣ ಮಾಡಿದ್ದ ಕೆ.ಪಿ.ಚೌಧರಿ ಹೈದರಾಬಾದ್‌ನಲ್ಲಿ ವಾಸವಿದ್ದರು. ಆದರೆ, ಕೆಲವು ದಿನಗಳಿಂದ ಗೋವಾದ ಹೋಟೆಲ್‌ವೊಂದರಲ್ಲಿ ರೂಮ್ ಬಾಡಿಗೆಗೆ ಪಡೆದು ವಾಸಿಸುತ್ತಿದ್ದರು.
ಗೋವಾದಲ್ಲಿ ಕಳೆದ ಏಳು ತಿಂಗಳಿAದ ವಾಸವಿದ್ದ ಕೆ.ಪಿ.ಚೌಧರಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗೋವಾದ ಅಂಜನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಶವಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಶವಪರೀಕ್ಷೆಯ ನಂತರವಷ್ಟೇ ಚೌಧರಿ ಅವರದ್ದು ಆತ್ಮಹತ್ಯೆಯೋ ಅಥವಾ ಬೇರೇನಾದರೂ ನಡೆದಿದೆಯೋ ಎಂಬ ಅನುಮಾನಕ್ಕೆ ಉತ್ತರ ಸಿಗಲಿದೆ.