ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದೆಹಲಿಯ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದ್ದು, ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ದೆಹಲಿಯ 70 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬೆಳಗ್ಗೆ 8 ಗಂಟೆಯಿAದ ಸಂಜೆ ಆರು ಗಂಟೆಯವರೆಗೆ ಮತದಾನ ನಡೆಯಲಿದೆ. ಅಂಗವಿಕಲ ಮತ್ತು ವಯೋವೃದ್ಧ 6,980 ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ನೀಡಲಾಗಿದೆ.
ದೆಹಲಿಯ ಪೊಲೀಸರ ಜತೆಗೆ 19 ಸಾವಿರ ಗೃಹರಕ್ಷಕ ಸಿಬ್ಬಂದಿಯನ್ನು ಚುನಾವಣಾ ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಹಲವು ಘಟಾನುಘಟಿ ನಾಯಕರ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಸತತ ಎರಡು ಬಾರಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಅರವಿಂದ ಕೇಜ್ರೀವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿಯಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್ ಕೂಡ ಸ್ವತಂತ್ರವಾಗಿ ಸ್ಪರ್ಧೆ ಮಾಡಿದೆ.