ಹೊಸದಿಲ್ಲಿ: ಹಿರಿಯ ನಾಗರಿಕರಿಗೆ ಕೇಂದ್ರ ಸರಕಾರ ತನ್ನ ಬಜೆಟ್‌ನಲ್ಲಿ ಬಂಪರ್ ಘೋಷಣೆ ಮಾಡಿದ್ದು, 1 ಲಕ್ಷ ರುಗಳವರೆಗೆ ಟಿಡಿಎಸ್ ವಿನಾಯಿತಿ ನೀಡಿದೆ.
ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿರುವ ಬಜೆಟ್‌ನಲ್ಲಿ ಹಿರಿಯ ನಾಗರಿಕರಿಗೆ ಹಲವು ಲಾಭಗಳನ್ನು ಘೊಷಣೆ ಮಾಡಿದ್ದಾರೆ. ಜತೆಗೆ, ಟಿಸಿಎಸ್ ಒಂದು ಲಕ್ಷದಿಂದ 10 ಲಕ್ಷಕ್ಕೆ ಏರಿಕೆ ಮಾಡಲಾಗಿದೆ.
ಹಿರಿಯ ನಾಗರಿಕರಿಗೆ ವಿದೇಶದಿಂದ ಬರುವ ಹಣಕ್ಕೆ ತೆರಿಗೆ ವಿನಾಯಿತಿ ನೀಡಲು ಬಜೆಟ್‌ನಲ್ಲಿ ತೀರ್ಮಾನಿಸಲಾಗಿದೆ. ಇದರಿಂದಾಗಿ ಹಿರಿಯ ನಾಗರಿಕರಿಗೆ ಅನುಕೂಲವಾಗಲಿದೆ.