ಹೊಸದಿಲ್ಲಿ: ಚುನಾವಣಾ ಬಾಂಡ್ ಅಕ್ರಮ ಆರೋಪದಲ್ಲಿ ನಳೀನ್ ಕುಮಾರ್ ಕಟೀಲ್‌ಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ.
ಚುನಾವಣೆ ಅಕ್ರಮ ನಡೆಸಿದ್ದು, ಬಾಂಡ್ ಮೂಲಕ ಅಕ್ರಮ ಹಣವನ್ನು ಪಡೆಯಲಾಗಿದೆ ಎಂದು ಆರೋಪ ಮಾಡಲಾಗಿತ್ತು. ಇದಕ್ಕೆ ಸಂಬಂಧ ಎಫ್‌ಐಆರ್ ದಾಖಲಿಸಲಾಗಿತ್ತು. ಈ ಎಫ್‌ಐಆರ್ ಅನ್ನು ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿತ್ತು.
ಹೈಕೋರ್ಟ್ ಕ್ರಮವನ್ನು ಪ್ರಶ್ನಿಸಿ ಜನಾಧಿಕಾರ ಸಂಘರ್ಷ ಸಮಿತಿಯ ಆದರ್ಶ ಅಯ್ಯರ್ ಎಂಬುವವರು ಮೇಲ್ಮನವಿ ಸಲ್ಲಿಕೆ ಮಾಡಿದ್ದರು. ಆದರೆ, ಸುಪ್ರೀಂ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದ್ದು, ಹೈಕೋರ್ಟ್ ಎಫ್‌ಐಆರ್ ರದ್ದುಗೊಳಿಸಿದ ಕ್ರಮ ಸರಿಯಿದೆ ಎಂದು ತಿಳಿಸಿದೆ.