ಅಪರಾಧ ರಾಜಕೀಯ ಸುದ್ದಿ

ಮೈಕ್ರೋ ಫೈನಾನ್ಸ್ ಕಿರುಕುಳ: ಇನ್ನೆರೆಡು ದಿನದಲ್ಲಿ ಸುಗ್ರೀವಾಜ್ಞೆ ಫೈನಲ್

Share It

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳತಕ್ಕೆ ಕಡಿವಾಣ ಹಾಕಲು ಸುಗ್ರಿವಾಜ್ಞೆ ಜಾರಿಗೆ ತರಲು ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಇದರ ರೂಪುರೇಷೆಗಳ ತಯಾರಿ ಇನ್ನೆರೆಡು ದಿನಗಳಲ್ಲಿ ಅಂತಿಮಗೊಳ್ಳಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳನ್ನು ಕಡಿವಾಣ ಹಾಕಲು ಹೊಸದಾಗಿ ಜಾರಿಗೆ ತರುವ ಮಸೂದೆಗೆ ಒಪ್ಪಿಗೆ ನೀಡಲಾಗಿದೆ.

ಕಾನೂನು ಮತ್ತು ಸಂಸದೀಯ ಸಚಿವ ಎಚ್ಕೆ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಸಂಪುಟ ಸಭೆಯ ತೀರ್ಮಾನಗಳನ್ನು ವಿವರಿಸಿದ್ದು, ಅಮಾನವೀಯವಾಗಿ ಮೈಕ್ರೋ ಪೈನಾನ್ಸ್ನಿಂದ ಸಾಲ ವಸೂಲಿ ಆಗುತ್ತಿದೆ. ಇಂದು ಕೂಡ ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, ಮಸೂದೆ ತರಲು ತೀರ್ಮಾನಿಸಿ ಕೆಲವು ತಾಂತ್ರಿಕ ಅಂಶಗಳ ಬಗ್ಗೆ ಚರ್ಚಿಸಿದ್ದೇವೆ ಎಂದರು.

ಮುಖ್ಯಮAತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಹಿರಿಯ ಸಚಿವರು ಸಭೆ ನಡೆಸಿ, ಸುಗ್ರೀವಾಜ್ಞೆಯ ಸಂಬAಧ ಕೆಲವು ಮಹತ್ವದ ವಿಚಾರಗಳನ್ನು ಚರ್ಚೆ ನಡೆಸಿದರು. ಯಾವುದೇ ಮಸೂದೆ ಜಾರಿಗೆ ಬರಬೇಕಾದರೂ ಕಾನೂನುಬದ್ಧವಾದ ಅಂಶಗಳನ್ನು ಒಳಗೊಳ್ಳಬೇಕು. ಹೀಗಾಗಿ, ಕಾನೂನಾತ್ಮಕವಾಗಿ ಮಸೂದೆ ಜಾರಿಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.


Share It

You cannot copy content of this page