ಗುಂಡ್ಲುಪೇಟೆ ಬಳಿ ಬೈಕ್‌ಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲಿಯೇ ಸಾವು
ಗುಂಡ್ಲುಪೇಟೆ: ಕಾರಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲಿಯೇ ಬೈಕ್‌ನಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆದಿದೆ.
ಗುಂಡ್ಲುಪೇಟೆಯ ಹಿರಿಕಾಟಿ ಗೇಟ್ ಬಳಿ ನಡೆದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕೂಡ್ಲಾಪುರ ಗ್ರಾಮದ ಶಶಿಧರ್, ಪತ್ನಿ ಶಾಲಿನಿ ಹಾಗೂ ತಾಯಿ ಭಾಗ್ಯಮ್ಮ ಮೃತರಾಗಿದ್ದಾರೆ.
ಮೃತರೆಲ್ಲರೂ ಚಿಕ್ಕದೇವಮ್ಮ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುವಾಗ ಘಟನೆ ನಡೆದಿದ್ದು, ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ಪಾರ್ಥಿವ ಶರೀರವನ್ನು ಗುಂಡ್ಲುಪೇಟೆ ಆಸ್ಪತ್ರೆಗೆ ಶವಪರೀಕ್ಷೆಗಾಗಿ ಕಳುಹಿಸಲಾಗಿದೆ. ತನಿಖೆ ಮುಂದುವರಿದಿದೆ.


