ಬೆಂಗಳೂರು: ದಿನಗೂಲಿ ನೌಕರರ ಶಡ್‌ಗಳನ್ನು ಏಕಾಏಕಿ ನೆಲಸಮಗೊಳಿಸಿದ್ದು ಹಾಗೂ ಕಾರ್ಮಿಕರ ವಿರುದ್ಧ ಜಾತಿನಿಂದನೆ ಹಾಗೂ ಜೀವಬೆದರಿಕೆ ಹಾಕಿದ ಆರೋಪದಲ್ಲಿ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಶಾಸಕ ಮುನಿರತ್ನ ಸಏರಿ ಏಳು ಜನರ ವಿರುದ್ಧ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೋಮವಾರ (ಜ.೨೦) ಬೆಳಗ್ಗೆ ೧೧ ಗಂಟೆಯಲ್ಲಿ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ದಿನಗೂಲಿ ಕಾರ್ಮಿಕರ ಮನೆಗಳನ್ನು ನೆಲಸಮ ಮಾಡಿರುವ ಆರೋಪ ಕೇಳಿ ಬಂದಿದೆ. ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯ ಅಕ್ಕಮಹಾದೇವಿ ಸ್ಲಂನಲ್ಲಿ ಸುಮಾರು ೫೦ಕ್ಕೂ ಹೆಚ್ಚು ಕುಟುಂಬಗಳು ಶೆಡ್‌ಗಳನ್ನ ನಿರ್ಮಿಸಿಕೊಂಡು ವಾಸಿಸುತ್ತಿದ್ದರು. ಸೋಮವಾರ ಬೆಳಿಗ್ಗೆ ಏಕಾಏಕಿ ಶಾಸಕ ಮುನಿರತ್ನ ಮತ್ತು ಸಹಚರರು ಜೆಸಿಬಿಯೊಂದಿಗೆ ಬಂದು ಶೆಡ್‌ಗಳನ್ನ ನೆಲಸಮಗೊಳಿಸಿದರು ಎನ್ನಲಾಗಿದೆ.
ಇದಕ್ಕೆ ಸಂಬAಧಿಸಿದAತೆ ದೂರು ನೀಡಿರುವ ಕಾರ್ಮಿಕರು ಏಕಾಏಕಿ ಶೆಡ್ ನೆಲಸಮ ಮಾಡಿದ್ದರಿಂದ ನಾವು ಕೂಡಿಟ್ಟ ಹಣ, ಚಿನ್ನ ಮಣ್ಣುಪಾಲು ಮಾಡಿದ್ದಾರೆ. ತಾವು ಮನವಿ ಮಡಿದರೂ ಸಹ ಜಾತಿ ನಿಂದನೆ ಮಾಡಿ, ಮಹಿಳೆಯರಿಗೆ ಚಪ್ಪಲಿ ಕಾಲಿನಿಂದ ಒದ್ದು ಬೆದರಿಕೆ ಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿದೆ. ಶೆಡ್‌ನಲ್ಲಿ ವಾಸವಿದ್ದ ಮಹಿಳೆಯೊಬ್ಬರು ನೀಡಿದ ದೂರಿನನ್ವಯ ಶಾಸಕ ಮುನಿರತ್ನ ಸೇರಿ ೭ ಜನರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಕಾಯ್ದೆ (ದೌರ್ಜನ್ಯ ತಡೆ) ಕಾಯ್ದೆಯನ್ವಯ ಪ್ರಕರಣ ದಾಖಲಿಸಲಾಗಿದೆ