ತುಮಕೂರು ರಸ್ತೆಯಲ್ಲಿ ಕಾರಿಗೆ ಬೆಂಕಿ: ಹೊತ್ತಿ ಉರಿದ ಕಾರು
ಬೆಂಗಳೂರು: ತುಮಕೂರು ರಸ್ತೆಯಲ್ಲಿ ಕಾರೊಂದು ಇದ್ದಕ್ಕಿದ್ದಂತೆ ಹೊತ್ತಿಉರಿದಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತುಕೂರು ರಸ್ತೆಯ ಮಾದಾವರ ಬಳಿ ಘಟನೆ ನಡೆದಿದ್ದು, ರಸ್ತೆಯಲ್ಲಿ ಹೊತ್ತಿ ಉರಿದ ಪರಿಣಾಮ ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕಾರಿನಲ್ಲಿದ್ದವರು ತಕ್ಷಣವೇ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರು ಗೊಲ್ಲರಹಟ್ಟಿಯ ರವಿ ಎಂಬುವವರಿಗೆ ಸೇರಿದ್ದು ಎಂದು ಹೇಳಲಾಗಿದೆ. ಅವರು ಕುಟುಂಬ ಸಮೇತ ನೆಲಮಂಗಲದಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ.
ಮಾದಾವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


