ಕಲಬುರಗಿ: ವಿಜಯಪುರ, ಧಾರವಾಡದಲ್ಲಿ ಸದ್ದು ಮಾಡಿದ್ದ ವಕ್ಫ್ ಬೊಡ್೯ ಆಸ್ತಿ ವಿವಾದ ಇದೀಗ ಕಲಬುರಗಿಯಲ್ಲೂ ಸಮಸ್ಯೆ ಎದುರಾಗಿದೆ. ಜಿಲ್ಲೆಯ ಚಿಂಚೋಳಿ ತಾಲೂಕಿನ 45ಕ್ಕೂ ಹೆಚ್ಚು ರೈತರಿಗೆ ವಕ್ಫ್ ಮಂಡಳಿಯಿಂದ ನೋಟಿಸ್ ಬಂದಿದೆ.
ಚಿಂಚೋಳಿ ತಾಲೂಕಿನ 45ಕ್ಕೂ ಹೆಚ್ಚು ರೈತರಿಗೆ ತಹಶೀಲ್ದಾರರು ನೋಟಿಸ್ ನೀಡಿದ್ದು, ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ನಮೂದು ಆಗಿದೆ ಎನ್ನಲಾಗಿದೆ. ನೋಟಿಸ್ ನೋಡಿ ರೈತರು ಕಂಗಾಲಾಗಿದ್ದಾರೆ.
ಚಿಂಚೋಳಿ ಪಟ್ಟಣದ ಮಹಾಂತೇಶ್ವರ ಮಠಕ್ಕೂ ನೋಟಿಸ್ ಜಾರಿ ಮಾಡಲಾಗಿದ್ದು, ಮಠದ 10×7 ಜಾಗ ತಮ್ಮದೆಂದು ವಕ್ಫ್ ಬೋರ್ಡ್ ನೋಟಿಸ್ನಲ್ಲಿ ಪ್ರತಿಪಾದಿಸಲಾಗಿದೆ. ಇದರಿಂದಾಗಿ ಲಕ್ಷಾಂತರ ರೂ. ಕೊಟ್ಟು ಜಮೀನು ಖರೀದಿ ಮಾಡಿದವರಿಗೂ ಸಂಕಷ್ಟ ಎದುರಾಗಿದೆ.