ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ತಿನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಕಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯ ವಿಚಾರಣೆ ಇಂದು(ಸೆ.2ರಂದು) ನಡೆಯಲಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಿಂದ 14 ಸೈಟ್‌ಗಳನ್ನು ಅಕ್ರಮವಾಗಿ ಪಡೆದ ಆರೋಪದಡಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ರದ್ದು ಕೋರಿ ಸಿದ್ದರಾಮಯ್ಯ ಕಾನೂನು ಸಮರ ನಡೆಸಿದ್ದಾರೆ.
ಹೈಕೋರ್ಟ್ನಲ್ಲಿ ಬಿರುಸಿನ ವಾದ ಪ್ರತಿವಾದಗಳು ನಡೆಯುತ್ತಿದ್ದು ಈಗಾಗಲೇ 3 ಬಾರಿ ವಿಚಾರಣೆ ಮುಂದೂಡಿಕೆಯಾಗಿದೆ. ಇಂದು ಮಧ್ಯಾಹ್ನ 2.30 ಕ್ಕೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠದಲ್ಲಿ ಮತ್ತೆ ವಿಚಾರಣೆ ಮುದುವರಿಯಲಿದೆ. ಎಲ್ಲರ ಚಿತ್ತ ಹೈಕೋರ್ಟ್ನತ್ತ ನೆಟ್ಟಿದೆ.