ಬೆಂಗಳೂರು: ರಾಜ್ಯಾದ್ಯಂತ ಬ್ಯಾಂಕ್ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಹುಬ್ಬಳ್ಳಿಯ ಕೆನೆರಾ ಬ್ಯಾಂಕ್ ದರೋಡೆ ಪ್ರಯತ್ನ ನಡೆದಿರುವುದು ಬೆಳಕಿಗೆ ಬಂದಿದೆ.
ಹುಬ್ಬಳ್ಳಿಯ ಎಪಿಎಂಸಿ ಆವರಣದಲ್ಲಿರುವ ಕೆನೆರಾ ಬ್ಯಾಂಕ್ ನಲ್ಲಿ ಕಳ್ಳತನದ ಪ್ರಯತ್ನ ನಡೆದಿದೆ. ಬ್ಯಾಂಕ್‌ನ ಶೆಲ್ಟರ್ ಬೀಗ ಮುರಿದು ದರೋಡೆಗೆ ಯತ್ನಿಸಿದ್ದಾರೆ. ಆದರೆ, ಸುಲಭವಾಗಿ ಬಾಗಿಲು ತೆರೆದುಕೊಳ್ಳಲು ಸಾಧ್ಯವಾಗದೆ ಬರಿಗೈಲಿ ವಾಪಸ್ಸಾಗಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿದ್ದು, ಕಳ್ಳತನಕ್ಕೆ ಪ್ರಯತ್ನ ನಡೆಸಿದವರ ಹುಟುಕಾಟಕ್ಕೆ ಮುಂದಾಗಿದ್ದಾರೆ. ಸುತ್ತಮುತ್ತಲ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ನಡೆಸಿರುವ ಪೊಲೀಸರು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.