ಆರೋಗ್ಯ ಸುದ್ದಿ

ಕಲುಷಿತ ನೀರು ಸೇವಿಸಿ 25 ಕ್ಕೂ ಹೆಚ್ಚು ಜನರು ಅಸ್ವಸ್ಥ

Share It

ಭದ್ರಾವತಿ: ಕಲುಷಿತ ನೀರು ಸೇವನೆಯಿಂದ ಒಂದೇ ಗ್ರಾಮದ 25 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆ ಜೋಳದಾಳ ಗ್ರಾಮದಲ್ಲಿ ನಡೆದಿದೆ.

ಚನ್ನಗಿರಿ ತಾಲೂಕಿನ ಜೋಳದಾಳ ಗ್ರಾಮದ 25 ಕ್ಕೂ ಹೆಚ್ಚು ಜನರು ಬುಧವಾರ ರಾತ್ರಿ ಅಸ್ವಸ್ಥಗೊಂಡಿದ್ದಾರೆ. 14 ಜನರನ್ನು ಚನ್ನಗಿರಿ ಸರ್ಕಾರಿ ಆಸ್ಪತ್ರೆಗೆ ಮತ್ತು 6 ಜನರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರಾವತಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ಐವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೊದಲು ನಾಲ್ಕು ಜನರರಲ್ಲಿ ವಾಂತಿ-ಬೇಧಿ ಕಂಡಿತು. ಬಳಿಕ ಗ್ರಾಮದ 25 ಜನರು ವಾತಿ-ಭೇದಿಯಿಂದ ಬಳಲಿದರು ಎನ್ನಲಾಗಿದೆ.

ಜೋಳದಾಳ ಗ್ರಾಮಕ್ಕೆ ಚನ್ನಗಿರಿ ಇಒ ಬಿ.ಕೆ.ಉತ್ತಮ್, ಕುಡಿಯುವ ನೀರು ವಿಭಾಗದ ಎಇಇ ಲೋಹಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೋಳದಾಳ ಗ್ರಾಮದಲ್ಲಿ ವೈದ್ಯರ ತಂಡ ಠಿಕಾಣಿ ಹೂಡಿದೆ. ಕಾಯಿಸಿ ಆರಿಸಿದ ನೀರು ಕುಡಿಯುವಂತೆ ಗ್ರಾಮಸ್ಥರಿಗೆ ವೈದ್ಯರು ಸಲಹೆ ನೀಡಿದ್ದಾರೆ.

ವಾರದ ಹಿಂದಷ್ಟೇ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹುಣದಘಟ್ಟ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಗ್ರಾಮದ ಏಳು ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಏಳು ಜನರಲ್ಲಿ ಚಂದ್ರಮ್ಮ (60) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಆಗಸ್ 21 ರಂದು ಆಸ್ಪಸ್ಥರಾಗಿ ಮೆಗ್ಗನ್ ಆಸ್ಪತ್ರೆಗೆ ಚಂದ್ರಮ್ಮ ದಾಖಲಾಗಿದ್ದರು. ವಾಂತಿ ಬೇಧಿ, ಜ್ವರದಿಂದ ಬಳಲುತ್ತಿದ್ದ ಚಂದ್ರಮ್ಮ ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದರು.


Share It

You cannot copy content of this page