ಸುದ್ದಿ

ಶ್ರವಣ ಬೆಳಗೊಳ ಪ್ರವಾಸೋದ್ಯಮ ಅಭಿವೃದ್ಧಿಗೆ ಶಾಸಕ ಸಿ ಎನ್ ಬಾಲಕೃಷ್ಣ ಮನವಿ

Share It

ಶ್ರವಣಬೆಳಗೊಳ: ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಸಾದ್ (PRASAD) ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ಶಾಸಕ ಸಿ.ಎನ್. ಬಾಲಕೃಷ್ಣ ನೇತೃತ್ವದಲ್ಲಿ ಕೇಂದ್ರ ಪ್ರವಾಸೋದ್ಯಮ ಇಲಾಖೆಯ ಜಂಟಿ ಕಾರ್ಯದರ್ಶಿ ಸುಹಾಸಿಸ್ ದಾಸ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ಶಾಸಕ ಸಿ.ಎನ್. ಬಾಲಕೃಷ್ಣ ಅವರು ಶ್ರವಣಬೆಳಗೊಳದ ಐತಿಹಾಸಿಕ, ಧಾರ್ಮಿಕ ಹಾಗೂ ಪ್ರವಾಸೋದ್ಯಮ ಮಹತ್ವವನ್ನು ವಿವರಿಸಿ, ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಕೇಂದ್ರ ಪ್ರವಾಸೋದ್ಯಮ ಇಲಾಖೆಯ ಜಂಟಿ ಕಾರ್ಯದರ್ಶಿ ಸುಹಾಸಿಸ್ ದಾಸ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಪ್ರಸಾದ್ ಯೋಜನೆಗೆ ಸಂಬಂಧಿಸಿದ ವಿಚಾರಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಶ್ರವಣಬೆಳಗೊಳ ಜೈನ ಮಠದ ಪ್ರತಿನಿಧಿ ರಾಜೇಶ್ ಖನ್ನಾ ಇದ್ದರು.


Share It

You cannot copy content of this page