ಬಿಎಸ್‌ವೈ ಮೇಲಿನ ಫೋಕ್ಸೋ ಕೇಸಿನ ದೂರುದಾರೆ ಸಾವು: ತನಿಖೆಗೆ ಮಹಿಳಾ ಆಯೋಗ ಆಗ್ರಹ

Share It

ಬೆಂಗಳೂರು : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದ ಸಂತ್ರಸ್ತ ಬಾಲಕಿಯ ತಾಯಿಯ ಸಾವಿನ ಕುರಿತು ರಾಜ್ಯ ಮಹಿಳಾ ಆಯೋಗ ಅನುಮಾನ ವ್ಯಕ್ತಪಡಿಸಿದ್ದು, ಪ್ರಕರಣದ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ರಾಜ್ಯ ಮಹಿಳಾ ಆಯೋಗದ ಮುಖ್ಯಸ್ಥೆ ನಾಗಲಕ್ಷ್ಮಿ ಚೌಧರಿ ಪತ್ರ ಬರೆದಿದ್ದಾರೆ.

ರಾಜ್ಯ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ಸೂಕ್ತ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಮುಖ್ಯಸ್ಥೆ ನಾಗಲಕ್ಷ್ಮಿ ಚೌಧರಿ ಆಗ್ರಹ ಮಾಡಿದ್ದು, ಆದಷ್ಟು ಬೇಗ ತನಿಖಾ ವರದಿಯನ್ನು ಆಯೋಗಕ್ಕೆ ಸಲ್ಲಿಸುವಂತೆ ಕೋರಿದ್ದಾರೆ. ಈ ಸಂಬAಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮಹಿಳೆಯ ಸಾವು ಪ್ರಕರಣ ದಾಖಲಾಗಿದೆ.

ಯಡಿಯೂರಪ್ಪ ವಿರುದ್ಧ 2024 ರ ಮಾರ್ಚ್ 15 ರಂದು ಪೋಕ್ಸೋ ಪ್ರಕರಣ ದಾಖಲಾಗಿತ್ತು. ಅತ್ಯಾಚಾರ ಪ್ರಕರಣದಲ್ಲಿ ತಮಗೆ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಲು ಫೆಬ್ರವರಿ 2 ರಂದು ಯಡಿಯೂರಪ್ಪ ನಿವಾಸಕ್ಕೆ ಹೋಗಿದ್ದಾಗ 17 ವರ್ಷದ ತಮ್ಮ ಮಗಳ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆ ಸದಾಶಿವನಗರ ಠಾಣೆಗೆ ದೂರು ನೀಡಿದ್ದರು. ಅದರನ್ವಯ ಪೋಕ್ಸೊ ಹಾಗೂ ಐಪಿಸಿ ಸೆಕ್ಷನ್ 354 (ಎ)ರಡಿ ಸದಾಶಿವನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಪ್ರಕರಣದ ತನಿಖೆಯನ್ನ ಸಿಐಡಿಗೆ ವಹಿಸಲಾಗಿತ್ತು.

ಆದರೆ ದೂರುದಾರ ಮಹಿಳೆ ಮೇ 27ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಉಸಿರಾಟದ ತೊಂದರೆಯಿAದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ನಿತ್ರಾಣಗೊಂಡು ಸಾವನ್ನಪ್ಪಿದ್ದರು. ಶ್ವಾಸಕೋಶದ ಕ್ಯಾನ್ಸರ್‌ನಿಂದ ಮಹಿಳೆ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದರು. ಮಹಿಳೆಯ ಸಾವು ಹಾಗೂ ಸಾವಿನ ನಂತರ ಮರಣೋತ್ತರ ಪರೀಕ್ಷೆ ನಡೆದಿರುವುದರ ಕುರಿತು ಅನುಮಾನಗಳಿವೆ ಎಂದು ಸೂಕ್ತ ತನಿಖೆ ನಡೆಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪತ್ರ ರವಾನಿಸಿದ್ದಾರೆ.


Share It

You May Have Missed

You cannot copy content of this page