ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿದ ಅರ್ಜಿ ವಿಚಾರಣೆ ಗುರುವಾರಕ್ಕೆ ನಿಗದಿ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಗುರುವಾರ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬಸ್ಥರಿಗೆ ಅಕ್ರಮವಾಗಿ 14 ನಿವೇಶನಗಳನ್ನು ಹಂಚಿಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇದು ಕಾನೂನು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದ್ದು, ರಾಜಕೀಯ ಜಿದ್ದಾಜಿದ್ದಿಗೂ ಕೂಡ ಕಾರಣವಾಗಿದೆ.
ಈ ನಡುವೆ ರಾಜ್ಯಪಾಲರ ವಿರುದ್ಧ ಕಾನೂನು ಸಮರಕ್ಕೂ ಸಿಎಂ ಮತ್ತು ಸರಕಾರ ತೀರ್ಮಾನಿಸಿದ್ದು, ರಾಜ್ಯಪಾಲರ ಕ್ರಮದ ವಿರುದ್ಧ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ಗುರುವಾರಕ್ಕೆ ನಿಗದಿಯಾಗಿದ್ದು, ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದ ಮುಂದೆ ವಿಚಾರಣೆ ನಡೆಯಲಿದೆ.
ಸಿಎಂ ಸಿದ್ದರಾಮಯ್ಯ ಪರವಾಗಿ ಅಭಿಷೇಕ್ ಸಿಂಘ್ವಿ ವಾದ ಮಂಡನೆ ಮಾಡಲಿದ್ದು, ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡನೆ ಮಾಡಲಿದ್ದಾರೆ.


