ಮುಡಾ ಕೇಸ್: ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ
ಬೆಂಗಳೂರು: ಮೈಸೂರಿನ ಮುಡಾ ಸೈಟ್ ಹಗರಣದಲ್ಲಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ ನಡೆಸಲು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಬೆಳಗ್ಗೆ 10:30 ರಿಂದ ಮುಂದುವರೆಯಲಿದೆ.
ಈಗಾಗಲೇ ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಅವರು ತಮ್ಮ ವಾದವನ್ನು ಪೂರ್ಣಗೊಳಿಸಿದ್ದಾರೆ. ಆದ್ದರಿಂದ ಇಂದು ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ವಕೀಲರಾದ ಮಣಿಂದರ್ ಸಿಂಗ್ ಅವರು ಪ್ರತಿ ವಾದ ಮಂಡಿಸಲಿದ್ದಾರೆ.
ನಂತರ ದೂರುದಾರರ ಪರ ವಕೀಲರಾದ ಕೆ.ಜಿ.ರಾಘವನ್, ಪ್ರಭುಲಿಂಗ್ ನಾವದಗಿ ಹಾಗೂ ರಂಗನಾಥ್ ರೆಡ್ಡಿ ಅವರುಗಳು ತಮ್ಮ ಪ್ರತಿ ವಾದ ಮಂಡಿಸಲಿದ್ದಾರೆ. ಹಾಗಾಗಿ ಹೈಕೋರ್ಟ್ ನಲ್ಲಿ ಇಂದೇ ಬಹುತೇಕ ವಿಚಾರಣೆ ಮುಗಿಯುವ ಸಾಧ್ಯತೆ ಇದೆ.