ಸುದ್ದಿ

ಉತ್ತರ ಕರ್ನಾಟಕ ಉತ್ಸವ 2026 ಲೋಗೊ ಬಿಡುಗಡೆ ಮಾಡಿದ ಸಚಿವ ಲಕ್ಷ್ಮಣ ಸವದಿ

Share It

ನವೆಂಬರ್ 29 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಉತ್ತರ ಕರ್ನಾಟಕ ಉತ್ಸವ

ಬೆಂಗಳೂರು: ಇದೇ ನವೆಂಬರ್ 29 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಉತ್ತರ ಕರ್ನಾಟಕ ಉತ್ಸವ 2026 ಲೋಗೊವನ್ನು ಸಹಕಾರ ಸಚಿವ ಲಕ್ಷ್ಮಣ ಸವದಿ ಬಿಡುಗಡೆ ಮಾಡಿದರು.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಲೋಗೊ ಬಿಡುಗಡೆ ಮಾಡಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಜನರು ಉದ್ಯೋಗ ಹಾಗೂ ವ್ಯಾಪಾರಕ್ಕಾಗಿ ರಾಜಧಾನಿ ಬೆಂಗಳೂರಿಗೆ ಆಗಮಿಸಿ ಇಲ್ಲಿಯೇ ನೆಲೆಯೂರಿದ್ದು, ಬೆಂಗಳೂರಿನ ವಿವಿಧ ಬಡಾವಣೆಗಳಲ್ಲಿ ಸುಮಾರು 25 ಲಕ್ಷಕ್ಕೂ ಹೆಚ್ಚು ಉತ್ತರ ಕರ್ನಾಕಟ ಭಾಗದ ಜನರು ವಾಸವಾಗಿದ್ದಾರೆ. ಬೆಂಗಳೂರಿನಲ್ಲಿರುವ ಸುಮಾರು 20 ಕ್ಕೂ ಉತ್ತರ ಕರ್ನಾಟಕ ಸಂಘಗಳು ಸೇರಿಕೊಂಡು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಎಂದು ಒಂದು ಒಕ್ಕೂಟ ಮಾಡಿಕೊಂಡಿದ್ದಾರೆ.
ಈ ಒಕ್ಕೂಟದ ವತಿಯಿಂದ ಮುಂಬರುವ ನವೆಂಬರ್ 29 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಉತ್ತರ ಕರ್ನಾಕಟ‌ ಉತ್ಸವ ಮಾಡಲು ತೀರ್ಮಾನಿಸಿದ್ದಾರೆ.
ಈ ಸಾಂಸ್ಕೃತಿಕ ಉತ್ಸವದ ಉದ್ಘಾಟನೆಗೆ ಮುಖ್ಯಮಂತ್ರಿ ಡಿ.ಕೆ‌. ಶಿವಕುಮಾರ ಅವರನ್ನೂ ಆಹ್ವಾನಿಸಿದ್ದೇವೆ. ನಾನೂ ಈ ಉತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಬೆಂಗಳೂರಿನಲ್ಲಿರುವ ಎಲ್ಲ ಉತ್ತರ ಕರ್ನಾಟಕ ಭಾಗದ ಜನರು ಆಗಮಿಸಿ, ಎಲ್ಲರೂ ಸೇರಿ ಈ ಉತ್ಸವವನ್ನು ಯಶಸ್ವಿಗೊಳಿಸೋಣ ಎಂದು ಹೇಳಿದರು
ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ಅಧ್ಯಕ್ಷ ಶಿವಕುಮಾರ ಆರ್. ಮೇಟಿ, ಪ್ರಧಾನ ಕಾರ್ಯದರ್ಶಿ ಶಂಕರ ಪಾಗೋಜಿ, ಕಾರ್ಯದರ್ಶಿ ಬಸಯ್ಯ ನಂದಿಕೋಲ್, ಸಹ ಸಂಘಟನಾ ಕಾರ್ಯದರ್ಶಿ ಶಾಂತೇಶ್ ಮಠ, ನಿರ್ದೇಶಕರಾದ ಸಂಜು ತೇಲಿ ಹಾಜರಿದ್ದರು.


Share It

You cannot copy content of this page