ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ/ ಅತಿಥಿ ಉಪನ್ಯಾಸಕರ ಭರ್ತಿಗೆ ಕಾಲೇಜು ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಖಾಯಂ ಉಪನ್ಯಾಸಕರಿಗೆ ಹಂಚಿಕೆಯಾಗಿ ಉಳಿದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಲಾಗುವುದು. ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ: ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಬೋಧಕರು ಸೇರಿ ವಿವಿಧ ವಿಷಯ ಬೋಧನೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ನಡೆಸಲಾಗುವುದು.
ವಿದ್ಯಾರ್ಹತೆ: ಅಭ್ಯರ್ಥಿಗಳು ಎರಡು ವರ್ಷದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಪಿಹೆಚ್ಡಿ ವಿದ್ಯಾರ್ಹತೆ ಅಥವಾ ಎನ್ಇಟಿ, ಕೆ-ಸೆಟ್, ಎಸ್ಎಸ್ಎಲ್ಇಟಿ ವಿದ್ಯಾರ್ಹತೆ, ಎಂಫಿಲ್ ವಿದ್ಯಾರ್ಹತೆ ಪಡೆದವರಿಗೆ ಹೆಚ್ಚಿನ ಅವಕಾಶ ಲಭ್ಯವಿದೆ.
ಅನುಭವ: ಅಭ್ಯರ್ಥಿಗಳು ಈಗಾಗಲೇ ಹಿಂದಿನ ವರ್ಷಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಮತ್ತು ಕೌನ್ಸಿಲಿಂಗ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ವೇತನ: 5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ, ಯುಜಿಸಿ ವಿದ್ಯಾರ್ಹತೆ ಹೊಂದಿದವರಿಗೆ 39 ಸಾವಿರ ರೂ.
5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿದವರಿಗೆ 38 ಸಾವಿರ ರೂ.
5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸದ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ 31 ಸಾವಿರ ರೂ. ವೇತನ ನಿಗದಿಸಲಾಗಿದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಗಸ್ಟ್ 31ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 7 ಆಗಿದೆ. ತಾತ್ಕಾಲಿಕ ಮೆರಿಟ್ ಪಟ್ಟಿ ಸೆಪ್ಟೆಂಬರ್ 8ರಂದು ಬಿಡುಗಡೆಯಾಗುವ ನಿರೀಕ್ಷೆ ಇದೆ.
ಅರ್ಜಿ ಸಲ್ಲಿಕೆ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗಳಿಗೆ ಅಭ್ಯರ್ಥಿಗಳು dce.karnataka.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.