ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಸೆ.12) ನಗರ ಪ್ರದಕ್ಷಿಣೆ ಕೈಗೊಂಡಿದ್ದಾರೆ.
ಬೆಳಗ್ಗೆ 11.30ಕ್ಕೆ ಗೃಹ ಕಚೇರಿ ಕೃಷ್ಣಾದಿಂದ ಸಿಎಂ ನೇತೃತ್ವದ ಸಚಿವರು ಹಾಗೂ ಶಾಸಕರು ತಂಡ ಹಲವು ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಲಿದೆ.
ತಂಡ ರಾಜಕಾಲುವೆ, ರಸ್ತೆ ಗುಂಡಿಗಳ ಪರಿಶೀಲನೆ ನಡೆಸಲಿದ್ದು, ನಿರ್ಮಾಣ ಹಂತದಲ್ಲಿರುವ ಕಾಮಗಾರಿಗಳ ವೀಕ್ಷಣೆಯನ್ನೂ ಮಾಡಲಿದ್ದಾರೆ. ನಗರ ಪ್ರದಕ್ಷಿಣೆಗೂ ಮುನ್ನ ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ 100 ಹೊಸ ಬಿಎಸ್6 ಬಿಎಂಟಿಸಿ ಬಸ್‌ಗಳಿಗೆ ಚಾಲನೆ ನೀಡಲಿದ್ದಾರೆ.
ರಾಜ್ಯ ಸರ್ಕಾರವು 336 ಕೋಟಿ ರೂಪಾಯಿ ವೆಚ್ಚದಲ್ಲಿ 840 ಹೊಸ ಬಸ್‌ಗಳನ್ನು ಖರೀದಿಗೆ ಒಪ್ಪಿಗೆ ನೀಡಿದ್ದು, ಮೊದಲ ಹಂತದಲ್ಲಿ 100 ಬಿಎಸ್ 6 ಬಸ್ಸುಗಳು ನಗರಕ್ಕೆ ಆಗಮಿಸಿದ್ದಯ, ಇವುಗಳಿಗೆ ಚಾಲನೆ ನೀಡಲಿದ್ದಾರೆ.