ಪ್ರಿಯಾಂಕ ವಿರುದ್ಧ ಸಿಎ ನಿವೇಶನ ಮಂಜೂರು ಆರೋಪ: ವಿವರಣೆ ಕೇಳಿದ ರಾಜ್ಯಪಾಲರು

Share It

ಬೆಂಗಳೂರು: ಪ್ರಭಾವ ಬಳಸಿ ಕೆಐಎಡಿಬಿಯಿಂದ ಸಿದ್ದಾರ್ಥ ಟ್ರಸ್ಟ್ಗೆ ಸಿಎ ನಿವೇಶನ ಮಂಜೂರು ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಟ್ರಸ್ಟಿಗಳಾಗಿರವ ಸಿದ್ಧಾರ್ಥ ವಿಹಾರ ಟ್ರಸ್ಟ್ಗೆ ನಿಯಮ ಉಲ್ಲಂಘನೆಯ ಜೊತೆಗೆ ತರಾತುರಿಯಲ್ಲಿ ಕೆಐಎಡಿಬಿಯಿಂದ ಐದು ಎಕರೆ ಸಿ.ಎ ನಿವೇಶನ ಮಂಜೂರು ಮಾಡಲಾಗಿದೆ.

ಪ್ರಿಯಾಂಕ್ ಖರ್ಗೆ ಸಚಿವರಾಗಿದ್ದುಕೊಂಡು ಹೀಗೆ ಸರ್ಕಾರಿ ಸೌಲಭ್ಯ ಪಡೆದಿದ್ದು ಸರಿಯೇ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿದ್ದರು.


Share It

You May Have Missed

You cannot copy content of this page