ವಿಜಯಪುರ: ಜಾತ್ರೆಯಲ್ಲಿ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಘನ ಗುರುಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಅವಘಡ ಸಂಭವಿಸಿದ್ದು, ದೇವೇಂದ್ರ ಬಡಿಗೇರ್ (24) ಮೃತ ದುರ್ದೈವಿ.
ರಥವನ್ನು ಎಳೆಯುವ ವೇಳೆ ಯುವಕ ಆಯತಪ್ಪಿ ಚಕ್ರದ ಅಡಿಗೆ ಸಿಲುಕಿದ್ದಾನೆ. ಕೂಡಲೇ ಗ್ರಾಮಸ್ಥರು ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ದಾರಿ ಮಧ್ಯೆ ದೇವೇಂದ್ರ ಮೃತಪಟ್ಟಿದ್ದಾರೆ. ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

