ರಾಜಕೀಯ ಸುದ್ದಿ

ಕೇಂದ್ರ ಸರ್ಕಾರ ಅಕ್ಕಿ ನೀಡಲು ರೆಡಿ ಇದ್ದರೂ ರಾಜ್ಯ ಸರ್ಕಾರ ಅಕ್ಕಿ ಖರೀದಿಸಲು ಸಿದ್ಧವಿಲ್ಲ: ಪ್ರಹ್ಲಾದ್ ಜೋಶಿ

Share It

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ಪೂರೈಸಲು ಸಿದ್ಧವಿದ್ದರೂ ರಾಜ್ಯ ಸರ್ಕಾರ ಖರೀದಿಗೆ ಸಿದ್ಧವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಿರುವ ಅಕ್ಕಿಯನ್ನು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ಕೆಜಿಗೆ 28 ​​ರೂ.ಗೆ ಮಾರಾಟ ಮಾಡಲು ಸಿದ್ಧವಿದೆ. ಈ ಬಗ್ಗೆ ತಿಂಗಳ ಹಿಂದೆಯೇ ಮಾಹಿತಿ ನೀಡಲಾಗಿತ್ತು. ಈ ವಿಚಾರ ಮುಖ್ಯ ಕಾರ್ಯದರ್ಶಿಗೂ ತಿಳಿದಿದೆ.

ಆಹಾರ ಸಚಿವ ಮುನಿಯಪ್ಪ ಅವರು ನನ್ನನ್ನ ಭೇಟಿ ಮಾಡಿ, ಅಕ್ಕಿ ಖರೀದಿಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ್ದರೂ ರಾಜ್ಯ ಸರ್ಕಾರ ಅಕ್ಕಿ ಖರೀದಿಸುವ ಬದಲು ನಗದು ವರ್ಗಾವಣೆಗೆ ನಿರ್ಧರಿಸಿದೆ ಎಂದು ಹೇಳಿದ್ದಾರೆ.


Share It

You cannot copy content of this page