ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಮೂಲಕ ರಾಜ್ಯ ರಾಜಕಾರಣದ ದೊಡ್ಡದೊಂದು ವಿವಾದಕ್ಕೆ ತೆರೆ ಎಳೆದಿದ್ದಾರೆ.
ಲೋಕಭವನಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ ಸಿಎಂ ಸಿದ್ದರಾಮಯ್ಯ ನಂತರ ಗೃಹ ಕಚೇರಿ ಕೃಷ್ಣ ದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿ ತಮ್ಮ ಅವಧಿಯಲ್ಲಿ ಮಾಡಿರುವ ಸಾಧನೆಗಳ ಬಗ್ಗೆ ವಿವರಿಸಿದರು.
ಇದೆ ಸಂದರ್ಭದಲ್ಲಿ ತಾವು ಇನ್ನೆರೆಡು ವರ್ಷ ಶಾಸಕರಾಗಿಯೇ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿ, ಹೈಕಮಾಂಡ್ ನೀಡಿದ ರಾಜ್ಯಸಭಾ ಆಫರ್ ಅನ್ನು ನಯವಾಗಿ ತಿರಸ್ಕಾರ ಮಾಡಿರುವುದುದಾಗಿ ತಿಳಿಸಿದರು.

