ಧಾರವಾಡ: ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಉದಯ ನಗರದಲ್ಲಿ ಗ್ಯಾಸ್ ಗೀಸರ್ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಇಲ್ಲಿನ ನಿವಾಸಿ ಮೊಹಮ್ಮದ್ ಅಲಿ ಧಾರವಾಡ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ ಸಂಪೂರ್ಣ ಕುಸಿದು ಬಿದ್ದಿದ್ದು, ಅವಶೇಷಗಳು ಅಕ್ಕಪಕ್ಕದ ಮನೆಗಳ ಮೇಲೆ ಬಿದ್ದಿವೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ತಾಯಿ ಹಾಗೂ ಇಬ್ಬರು ಮಕ್ಕಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಘಟನಾ ಸ್ಥಳಕ್ಕೆ ತಹಶಿಲ್ದಾರರ .ಹಾಗೂ ಮುಖ್ಯಾಧಿಕಾರಿ ಬೇಟಿನೀಡಿ ಹುಬ್ಬಳ್ಳಿ ಕೇಮ್ಸಗೆ ಬೇಟಿ ನೀಡಿ ಗಾಯಾಲುಗಳ ಆರೋಗ್ಯ ವಿಚಾರಿಸಿದರು. ಘಟನಾ ಸ್ಥಳಕ್ಕೆ ಧಾರವಾಡ ಜಿಲ್ಲಾ ಪೋಲಿಸ್ ವರಿಷ್ಠಾದಿಕಾರಿ ಗುಜನ್ ಆರ್ಯ ಬೇಟಿ ನೀಡಿ ತಪಾಸಣಿ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾದಿಕಾರಿಗಳಾದ ಗುಜನ್ ಆರ್ಯ, ತಹಶಿಲ್ದಾರರ ಮಂಜುನಾಥ ದಾಸಪ್ಪನವರ, ಮುಖ್ಯಾಧಿಕಾರಿ ವಾಯ್ ಜಿ ಗದ್ದಿಗೌಡರ ಪಿ ಎಸ್ ಆಯ್ ಉಮಾದೇವಿ ಹಾಗೂ ತಾಲೂಕು ಆಡಳಿತ ಪೋಲಿಸ್ ಅಧಿಕಾರಿಗಳು ಇದ್ದರು.

