ರಾಜಕೀಯ ಸುದ್ದಿ

ಸಿಎಂ ಪಟ್ಟಕ್ಕೆ ನಾನೂ ಅರ್ಹನಿದ್ದೇನೆ: ಗೃಹ ಸಚಿವ ಪರಮೇಶ್ವರ್

Share It

ಸಿಎಂ ಸ್ಥಾನಕ್ಕೆ ನಾನೂ ಅರ್ಹನಿದ್ದೇನೆ. ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸದ್ಯಕ್ಕೆ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗೆ ಇಳಿಯುತ್ತಿಲ್ಲ. ಒಂದು ವೇಳೆ ಹೈಕೋರ್ಟ್ ತೀರ್ಪು ಸಿಎಂ ಸಿದ್ದರಾಮಯ್ಯ ವಿರುದ್ಧ ಬಂದರೆ ಆಗ ಸುಪ್ರೀಂಕೋರ್ಟ್ ಮೊರೆ ಹೋಗಲಾಗುತ್ತದೆ ಎಂದರು.

ಸಿಎಂ ಸ್ಥಾನ ಖಾಲಿಯಾದರೆ ಅದರ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ.‌ ಹಲವಾರು ನಾಯಕರು ಸಿಎಂ ಸ್ಥಾನಕ್ಕೆ ಅರ್ಹರಿದ್ದಾರೆ. ಆದರೆ ಸಿಎಂ ಬದಲಾವಣೆ ಸಂದರ್ಭವೇ ಇಲ್ಲ ಎಂದು ಸ್ಪಷ್ಟಪಡಿಸಿದರು.


Share It

You cannot copy content of this page