ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ ಸುಮಾರು 72,186 ಹುದ್ದೆಗಳನ್ನು ಭರ್ತಿ ಮಾಡಲು ಅನುಮೋದನೆ ನೀಡಿದೆ.
2023-24ನೇ ಸಾಲಿನಿಂದ ಇಲ್ಲಿಯವರೆಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 40,009 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಸಹಮತಿ ನೀಡಿದೆ.
ಕಲ್ಯಾಣ-ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 32,177 ಹುದ್ದೆಗಳು (ಕಲ್ಯಾಣ-ಕರ್ನಾಟಕ ಸ್ಥಳೀಯ ವೃಂದದ ಹುದ್ದೆಗಳಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ ಶೇಕಡಾ 80 ರಷ್ಟು ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಯು ಈಗಾಗಲೇ ಪರಿಭಾವಿತ ಸಹಮತಿ ನೀಡಿರುತ್ತದೆ)
ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಆಯ್ಕೆ ಪ್ರಾಧಿಕಾರಗಳಿಂದ ಕ್ರಿಯಾ ಯೋಜನೆಗಳನ್ನು ಪಡೆದು ಸಚಿವ ಸಂಪುಟದ ಅನುಮೋದನೆಗೆ ಮಂಡಿಸಲಾಗಿತ್ತು.
ಸಚಿವ ಸಂಪುಟವು17 ಇಲಾಖೆಗಳಲ್ಲಿ ನೇರನೇಮಕಾತಿ ಮೂಲಕ ಭರ್ತಿ ಮಾಡಬೇಕಾದ ಹುದ್ದೆಗಳನ್ನು ತ್ವರಿತಗತಿಯಲ್ಲಿ ಭರ್ತಿ ಮಾಡಲು ಮೇಲುಸ್ತುವಾರಿಗಾಗಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರು ಇವರಿಗೆ ಜವಾಬ್ದಾರಿ ನೀಡಿದೆ 34 ಇಲಾಖೆಗಳಲ್ಲಿನ ನೇರನೇಮಕಾತಿ ಮೂಲಕ ಭರ್ತಿ ಮಾಡಬೇಕಾದ ಹುದ್ದೆಗಳನ್ನು ತ್ವರಿತ ಗತಿಯಲ್ಲಿ ಭರ್ತಿ ಮಾಡುವ ಕುರಿತು ಮೇಲುಸ್ತುವಾರಿ ಮಾಡಲು ಕರ್ನಾಟಕ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಇವರಿಗೆ ಜವಾಬ್ದಾರಿ ನೀಡಿ ನಿರ್ಣಯಿಸಿರುತ್ತದೆ.

