ಬೆಂಗಳೂರು: ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯಲ್ಲಿ ಕಾಡಾನೆಯ ಮೇಲೆ ಬೈಕ್ ಸವಾರರು ಕಲ್ಲು ತೂರಾಟ ನಡೆಸಿ, ಕೆಣಕಿರುವ ಘಟನೆ ಸಂಬಂಧಿಸಿದಂತೆ ಬೈಕ್ ಸವಾರರ ಮೇಲೆ ಪ್ರಕರಣ ದಾಖಲಿಸುವಂತೆ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಒಂದು ವೀಡಿಯೊವನ್ನು ನಾನು ವೈಯಕ್ತಿಕವಾಗಿ ವೀಕ್ಷಿಸಿದ್ದೇನೆ. ಸದರಿ ವೀಡಿಯೊದಲ್ಲಿ ನಾಗರಹೊಳೆ ಅರಣ್ಯ ವ್ಯಾಪ್ತಿಯ ರಸ್ತೆ ಬದಿಯಲ್ಲಿದ್ದ ಆನೆಯ ಮೇಲೆ KA 09 HY 0257 ನೋಂದಣಿ ಸಂಖ್ಯೆಯ ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಉದ್ದೇಶಪೂರ್ವಕವಾಗಿ ಕಲ್ಲುಗಳನ್ನು ತೂರಿ, ವನ್ಯಜೀವಿಗಳ ಮೇಲೆ ಕ್ರೌರ್ಯ ಎಸಗಿರುವುದು ಅತ್ಯಂತ ಕಳವಳಕಾರಿ ಮತ್ತು ಖಂಡನೀಯ ವಿಷಯವಾಗಿದೆ ದುಂದು ತಿಳಿಸಿದ್ದಾರೆ.
ವನ್ಯಜೀವಿಗಳ ಸಂರಕ್ಷಣೆ ಮತ್ತು ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಇಂತಹ ಬೇಜವಾಬ್ದಾರಿ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ.ಆದುದರಿಂದ, ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಕೂಡಲೇ ವೀಡಿಯೊದಲ್ಲಿರುವ ದ್ವಿಚಕ್ರ ವಾಹನವನ್ನು (KA 09 HY 0257) ಹಾಗೂ ಕೃತ್ಯವೆಸಗಿದ ವ್ಯಕ್ತಿಗಳನ್ನು ಪತ್ತೆ ಹಚ್ಚಿ, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ (Wildlife Protection Act) ತಕ್ಷಣವೇ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದಿದ್ದಾರೆ.
ಈ ಕುರಿತು ಕೈಗೊಂಡ ಕ್ರಮದ ಬಗ್ಗೆ ಕೂಡಲೇ ವರದಿ ಸಲ್ಲಿಸುವಂತೆ ಅರಣ್ಯ ಪಡೆ ಮುಖ್ಯಸ್ಥರಾದ ಬಿಪಿ ರವಿ ಅವರಿಗೆ (HoFF) ನಿರ್ದೇಶನ ನೀಡಿದ್ದೇನೆ. ವರದಿಯ ನಂತರ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸುತ್ತೇನೆ ವೆಂಡು ತಿಳಿಸಿದ್ದಾರೆ.
