ಸಿನಿಮಾ ಸುದ್ದಿ

ರೆಬೆಲ್ ಸ್ಟಾರ್ ಅಂಬರೀಶ್ ಗೆ ಕರ್ನಾಟಕ ರತ್ನ ನೀಡಿ: ಸಚಿವ ರಾಮಲಿಂಗಾ ರೆಡ್ಡಿ ಮನವಿ 

Share It

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ರಾಮಲಿಂಗಾ ರೆಡ್ಡಿ ಶಿಫಾರಸು ಮಾಡಿದ್ದಾರೆ. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಗೆ ಪತ್ರ ಬರೆದಿರುವ ಅವರು, ತಮಗೆ ಅಂಬರೀಶ ಅಭಿಮಾನಿಗಳು ಮಾಡಿರುವ ಮನವಿಯನ್ನು ಉಲ್ಲೇಖ ಮಾಡಿದ್ದು, ಮುಂಬರುವ ರಾಜ್ಯೋತ್ಸವ ಅಥವಾ ಸೂಕ್ತ ಸಂದರ್ಭದಲ್ಲಿ ಅಂಬರೀಶ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸುವಂತೆ ಮನವಿ ಮಾಡಿದ್ದಾರೆ. 

ಅಂಬರೀಶ್ ಅವರು ಕಲಾವಿದರಾಗಿದ್ದು, ರಾಜಕಾರಣಿಯಾಗಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಮಂಡ್ಯದ ಗಂಡು ಎಂದು ಖ್ಯಾತಿ ಗಳಿಸಿ ಆ ಭಾಗದ ಜನರ ಕಣ್ಮಣಿಯಾಗಿದ್ದರು. ಜತೆಗೆ ಚಿತ್ರರಂಗದಲ್ಲಿ ಯಾವುದೇ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಮೂಲಕ ಕಲಾವಿದರ ಹಿತ ಕಾಯುವಲ್ಲಿ ಶ್ರಮಿಸಿದ್ದಾರೆ. ಕೇಂದ್ರ ಹಾಗು ರಾಜ್ಯದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ಅವರನ್ನು ಕರ್ನಾಟಕ ರತ್ನ ಪ್ರಶಸ್ತಿಗೆ ಪರಿಗಣಿಸಬೇಕು ಎಂದು ಅವರು ಶಿಫಾರಸು ಮಾಡಿದ್ದಾರೆ. 


Share It

You cannot copy content of this page