ಸುದ್ದಿ

ಬೆಳಗಾವಿ: ಸತೀಶ್ ಜಾರಕಿಹೊಳಿ ಸೋದರಳಿಯನಿಗೆ ಇಡಿ ಬಿಗ್ ಶಾಕ್

Share It

ಬೆಳಗಾವಿ: ಸಚಿವ ಸತೀಶ ಜಾರಕಿಹೊಳಿ ಅವರ ಸಹೋದರಿಯ ಪತಿಗೆ ಇಡಿ ಬುಧವಾರ ಬೆಳಗ್ಗೆ ಬಿಗ್ ಶಾಕ್ ನೀಡಿದೆ. ಮಂಜುನಾಥ ಮನೆ ಸೇರಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿರುವ ವೈ. ಮಂಜುನಾಥ ಅವರ ಮೇಲೆ ಈ ದಾಳಿ ನಡೆದಿದೆ. ಈ ದಾಳಿ ಬೆಳಗಾವಿಯಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ.

ಡಾ.ವೈ.ಮಂಜುನಾಥ ಅವರ ಮನೆ ಮತ್ತು ಕಚೇರಿಗಳ ಮೇಲೆ ಬುಧವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿರುವ ಆರೋಪಕ್ಕೆ ಸಂಬಂಧಿಸಿ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಸಚಿವ ಸತೀಶ ಜಾರಕಿಹೊಳಿ ಅವರ ಸಹೋದರಿಯ ಪತಿ, ಬಳ್ಳಾರಿಯ ಮಾಜಿ ಸಂಸದ ದೇವೇಂದ್ರಪ್ಪ ಅವರ ಪುತ್ರನಾಗಿರುವ ಮಂಜುನಾಥ ಅವರನ್ನು ಗುರಿಯಾಗಿರಿಸಿ ಗೋವಾ ಮತ್ತು ಬೆಂಗಳೂರಿನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಏಕಕಾಲದಲ್ಲಿ ಬೆಳಗಾವಿ, ಬೆಂಗಳೂರು, ಮೈಸೂರು ಮತ್ತು ಗೋವಾದಲ್ಲಿ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ. ಅಧಿಕಾರಿಗಳು ದಾಳಿ ವೇಳೆ ಭದ್ರತೆಗಾಗಿ ಅರೆಸೇನಾ ಪಡೆಯ ಸಿಬಂದಿಗಳನ್ನು ಬಳಸಿಕೊಂಡಿದ್ದಾರೆ.

ಬೆಳಗಾವಿ, ಮೈಸೂರು, ಬೆಂಗಳೂರು, ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಅರಸೀಕೆರೆ ಗ್ರಾಮದಲ್ಲಿರುವ ಎರಡೂ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.


Share It

You cannot copy content of this page