ಸುದ್ದಿ

ಬಾಗಲಕೋಟೆಯ ಸರ್ವತೋಮುಖ ಅಭಿವೃದ್ಧಿಗೆ ಕಾಂಗ್ರೆಸ್ ಶಕ್ತಿ ತುಂಬಲಿದೆ: ಸಚಿವ ರಾಮಲಿಂಗಾ ರೆಡ್ಡಿ

Share It

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರವಾಗಿ ವಿವಿಧ ಗ್ರಾಮಗಳಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಪ್ರಚಾರ ನಡೆಸಿ ಮತಯಾಚನೆ ಮಾಡಿದರು.

ಬಾಗಲಕೋಟೆಯ ಜನತೆಯ ಉತ್ಸಾಹ ಬದಲಾವಣೆಯ ಮುನ್ಸೂಚನೆ ನೀಡುತ್ತಿದೆ.

ಕ್ಷೇತ್ರದ ಸುಭದ್ರ ಭವಿಷ್ಯಕ್ಕಾಗಿ ಹಾಗೂ ಸರ್ವತೋಮುಖ ಪ್ರಗತಿಗಾಗಿ ನಮ್ಮ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಹರಸಬೇಕೆಂದು ವಿನಂತಿಸುತ್ತೇನೆ ಎಂದರು.

ಮಾಜಿ ಸಚಿವ ಎಸ್.ಆರ್. ಪಾಟೀಲ್, ಶಾಸಕರಾದ ಜೆ.ಟಿ. ಪಾಟೀಲ್, ಎನ್.ಹೆಚ್. ಕೋನರೆಡ್ಡಿ, ನಾಯಕರಾದ ಎಸ್.ಜಿ. ನಂಜಯ್ಯನಮಠ, ಸಿದ್ದು ಕೊಣ್ಣೂರ ಸೇರಿ ಗ್ರಾಮದ ಮುಖಂಡರು, ಹಿರಿಯರು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


Share It

You cannot copy content of this page